ಬಾಗಲಕೋಟೆಯ ನವನಗರದಲ್ಲಿ ಇಂದು ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ–3ರಡಿ ಭೂಸ್ವಾಧೀನಗೊಂಡ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ, ಎಚ್.ವೈ. ಮೇಟಿ ಅವರ ಕನಸಿನ ಯೋಜನೆಯಾದ ₹450 ಕೋಟಿ ವೆಚ್ಚದ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯವನ್ನು ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಾಗಲಕೋಟೆ ಜನರ ಬಹುದಿನಗಳ ಕನಸು ಈಡೇರಿದಂತಾಗಿದೆ ಎಂದರು.
ಇದೇ ವೇಳೆ ರಾಜ್ಯದ ಸೇತುವೆಗಳ ಅಭಿವೃದ್ಧಿಗೆ ₹60 ಕೋಟಿ ಮತ್ತು ಬಾಗಲಕೋಟೆ ಕ್ಷೇತ್ರದ 10 ರಸ್ತೆಗಳ ಅಭಿವೃದ್ಧಿಗೆ ₹35 ಕೋಟಿ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು. ಕೃಷ್ಣಾ ಮೇಲ್ದಂಡೆ ಯೋಜನೆಗೆ ನಮ್ಮ ಸರ್ಕಾರ ಸದಾ ಅನುದಾನ ನೀಡಿದೆ ಎಂದು ತಿಳಿಸಿದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ