ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಚರಂತಿಮಠ: ಇಂದು ಸಾಂಕೇತಿಕ ನಾಮಪತ್ರ
By Petkarmedia NEWS Desk|Bagalkot
ಬಾಗಲಕೋಟೆ: ಉಪಚುನಾವಣೆಯ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾರ್ಚ್ 23ರಂದು ಭರ್ಜರಿ ಮೆರವಣಿಗೆಯೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಂಸದ ಜಗದೀಶ್ ಶೆಟ್ಟರ್ ಹಾಗೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಬಿಜೆಪಿಗೆ ಅನುಕೂಲಕರ ವಾತಾವರಣವಿದ್ದು, ಸರ್ಕಾರವೇ ಇಲ್ಲಿ ಠಿಕಾಣಿ ಹೂಡಿದರೂ ಯಾವುದೇ ಪರಿಣಾಮ ಇರುವುದಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಮತದಾರರು ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ