ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ… ಸ್ವಾಭಿಮಾನಕ್ಕೆ ಧಕ್ಕೆ… ಅಂತ ಹೇಳಿ ಬಿಜೆಪಿ ಸೇರ್ಪಡೆಗೊಂಡ ಡಾ. ದೇವರಾಜ ಪಾಟೀಲರ ಕಿಡಿಕಾರಿದ ಮಾತುಗಳು ವೈರಲ್!
By Petkarmedia news desk| Bagalkot
ಬಾಗಲಕೋಟೆ:ಕಾಂಗ್ರೆಸ್ ಪಕ್ಷದಲ್ಲಿ ತಮ್ಮಂತಹ ನಿಷ್ಠಾವಂತ ಕಾರ್ಯಕರ್ತರಿಗೆ ಸೂಕ್ತ ಸನ್ಮಾನ ಮತ್ತು ಮರ್ಯಾದೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿರುವ ಬಿಜೆಪಿ ಸೇರ್ಪಡೆಯಾದ ಮುಖಂಡ ಡಾ. ದೇವರಾಜ ಪಾಟೀಲ ಅವರು, ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಸಂದರ್ಭಗಳಲ್ಲಿ ಅಲ್ಲಿ ಮುಂದುವರಿಯುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಕಾಂಗ್ರೆಸ್ ಪಕ್ಷಕ್ಕಾಗಿ ತನು, ಮನ, ಧನದಿಂದ ನಿಷ್ಠೆಯಾಗಿ ಕೆಲಸ ಮಾಡಿದ್ದೇವೆ. ಆದರೆ ಟಿಕೆಟ್ ನೀಡಿದ ಬಳಿಕ ಅದನ್ನು ಹಿಂತೆಗೆದುಕೊಂಡ ಕ್ರಮದಿಂದ ನಮ್ಮ ಆತ್ಮಗೌರವಕ್ಕೆ ಧಕ್ಕೆಯಾಯಿತು. ಇಂತಹ ಪರಿಸ್ಥಿತಿಯಲ್ಲಿ ಅಲ್ಲಿ ಉಳಿಯುವುದು ಸೂಕ್ತವಲ್ಲ” ಎಂದು ಹೇಳಿದರು.
ಇನ್ನು ಮುಂದೆ ಬಿಜೆಪಿ ಪಕ್ಷದೊಂದಿಗೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದ ಅವರು, “ಯುವ ಮತ್ತು ಉತ್ಸಾಹಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ಹಾಗೂ ಸ್ಥಳೀಯ ನಾಯಕರ ಮಾರ್ಗದರ್ಶನದಲ್ಲಿ ನಾವು ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ” ಎಂದು ಹೇಳಿದರು.
ಸ್ಥಳೀಯ ನಾಯಕತ್ವದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಪಕ್ಷದ ತತ್ವಗಳು ಮತ್ತು ಸಂಘಟನೆಯ ಬಲದೊಂದಿಗೆ ಮುಂದಿನ ದಿನಗಳಲ್ಲಿ ಜನಸೇವೆ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ