ಬಾಗಲಕೋಟೆ: ನೂತನ ಪೊಲೀಸ್ ವಸತಿ ಗೃಹಗಳಿಗೆ ಭೂಮಿ ಪೂಜೆ

ಬಾಗಲಕೋಟೆ: ಗ್ರಾಮೀಣ ಪೊಲೀಸ್ ಠಾಣೆ ಆವರಣದಲ್ಲಿ ನೂತನ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾರ್ಯಕ್ಕೆ ಭಾನುವಾರ ಭೂಮಿ ಪೂಜೆ ನೆರವೇರಿಸಲಾಯಿತು.


  ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್. ಬಿ. ತಿಮ್ಮಾಪೂರ ಅವರು ವಿಧಿವಿಧಾನಗಳೊಂದಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿದ್ಧಾರ್ಥ ಗೋಯಲ್ (ಐಪಿಎಸ್), ಪೊಲೀಸ್ ಉಪಾಧೀಕ್ಷಕರಾದ ಗಜಾನನ ಸುತಾರ್ (ಕೆಎಸ್‌ಪಿಎಸ್) ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಪೊಲೀಸ್ ಸಿಬ್ಬಂದಿಗೆ ಉತ್ತಮ ವಸತಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಲಾಯಿತು.

ಕಾಮೆಂಟ್‌ಗಳು