ಬೆಂಗಳೂರು ನಗರ ಲೋಕಾಯುಕ್ತ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಆಧಾರದಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದರು.
ಈ ದಾಳಿ ಬೆಂಗಳೂರು ಸೇರಿದಂತೆ ಬಾಗಲಕೋಟೆ ಜಿಲ್ಲೆಯಲ್ಲಿಯೂ ನಡೆಯಿತು. ಬಾಗಲಕೋಟೆಯ ಪೋಸ್ಟಲ್ ಕಾಲೋನಿಯಲ್ಲಿರುವ ವಸಂತ ನಾಯಕ್ ಅವರ ಸಹೋದರ ಹಾಗೂ ಡಿಎಆರ್‌ನಲ್ಲಿ ಎಎಸ್‌ಐ ಆಗಿರುವ ಭೀಮಸಿಂಗ್ ನಾಯಕ್ ಅವರ ಮನೆ ಮೇಲೂ ಅಧಿಕಾರಿಗಳು ಶೋಧ ನಡೆಸಿದರು.
ಇದೇ ವೇಳೆ ಬಾಗಲಕೋಟೆ ತಾಲ್ಲೂಕಿನ ಬಿಲ್‌ಕೆರೂರು ಗ್ರಾಮದಲ್ಲಿರುವ ವಸಂತ ನಾಯಕ್ ಅವರ ಮೂಲ ಮನೆ ಮೇಲೂ ಪರಿಶೀಲನೆ ನಡೆಯಿತು. ಬಾಗಲಕೋಟೆ ಲೋಕಾಯುಕ್ತ ಎಸ್‌ಪಿ ಮಾನಿಂಗ್ ನಂದಗಾವಿ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ