ಬಾಗಲಕೋಟೆ: ಶಿವಾಜಿ ಜಯಂತಿ ಘಟನೆ: ಅಲ್ಪಸಂಖ್ಯಾತರ ಆಯೋಗ ತಂಡದಿಂದ ಜಿಲ್ಲಾಡಳಿತದೊಂದಿಗೆ ಸಮಾಲೋಚನೆ

ಬಾಗಲಕೋಟೆ:ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರಾದ ಅಬ್ದುಸ್ ಸಲಾಂ ಪುತ್ತಿಗೆ, ಪರಿಮಳಾ ಜೈನ್ ಹಾಗೂ ಆಯೋಗದ ಅಧ್ಯಕ್ಷರ ಆಪ್ತ ಸಹಾಯಕ ರಾಮಯ್ಯ ಒಳಗೊಂಡ ತಂಡ ಜಿಲ್ಲೆಗೆ ಆಗಮಿಸಿ, ಶಿವಾಜಿ ಜಯಂತಿ ಪ್ರಯುಕ್ತ ನಡೆದ ಮೆರವಣಿಗೆ ಸಂದರ್ಭದಲ್ಲಿ ನಡೆದ ಘಟನೆಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಮಾಲೋಚನೆ ಸಭೆ ನಡೆಸಿತು.

 ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ‌ಮಂಗಳವಾರ ನಡೆದ ಸಮಾಲೋಚನಾ ಸಭೆಯಲ್ಲಿ ಬಾಗಲಕೋಟೆ ನಗರದಲ್ಲಿ ಫೆಬ್ರವರಿ ೧೯ ರಂದು ಶಿವಾಜಿ ಜಯಂತಿ ಪ್ರಯುಕ್ತ ಮೆರವಣಿಗೆ ಸಂದರ್ಭದಲ್ಲಿ ನಡೆದ ಘಟನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ, ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ವಿವರವಾಗಿ ಸಭೆಗೆ ತಿಳಿಸಿದರು. ಜಿಲ್ಲಾಧಿಕಾರಿ ಸಂಗಪ್ಪ ಅವರು ನಗರದಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯ ಕ್ರಮಕೈಗೊಂಡಿರುವುದಾಗಿ ತಿಳಿಸಿದರು.

ಕಾಮೆಂಟ್‌ಗಳು