ಬಾದಾಮಿ :ತಾಲೂಕಿನ ಬೆಲೂರು ಗ್ರಾಮದ ನಿವಾಸಿ 80 ವರ್ಷದ ಕಮಲವ್ವ ಬಡಿಗೇರ ಅವರಿಗೆ ನಡೆಯಲು ಸಾಧ್ಯವಾಗದೆ ಜೀವನ ನಿರ್ವಹಣೆ ಕಷ್ಟಕರವಾಗಿತ್ತು. ಟೆಂಗಿನ ಗರಿಯ ಹೊದಿಕೆಯ ಜೋಪಡಿಯಲ್ಲಿ ವಾಸಿಸುತ್ತಿದ್ದ ಅಜ್ಜಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾಸ್ತಲ್ಯ ಕಾರ್ಯಕ್ರಮದಡಿ ಹೊಸ ಮನೆ ನಿರ್ಮಿಸಿ ಹಸ್ತಾಂತರಿಸಲಾಯಿತು.
ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ಹೆಗ್ಗಡೆ ಅವರ ಪ್ರೇರಣೆಯಿಂದ ನಡೆದ ಈ ಕಾರ್ಯದಲ್ಲಿ ಕಲ್ಯಾಣ ಕರ್ನಾಟಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಚಂದ್ರಶೇಖರ ಜೆ ಮನೆ ಹಸ್ತಾಂತರಿಸಿದರು.
ಶ್ರೀ ಸಿದ್ದೇಶ್ವರ ಪತ್ತಿನ ಸೌಹಾರ್ದ ಸಂಘದ ಅಧ್ಯಕ್ಷ ಶಾಂತಗೌಡ ಪಾಟೀಲ ಮನೆ ಉದ್ಘಾಟನೆ ನೆರವೇರಿಸಿ ಧರ್ಮಸ್ಥಳ ಯೋಜನೆಯ ಸಮಾಜಮುಖಿ ಕಾರ್ಯಗಳನ್ನು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ಜಯಶ್ರೀ ಪಾಟೀಲ, ಜನಜಾಗೃತಿ ವೇದಿಕೆ ಸದಸ್ಯ ರಮೇಶ್ ಹಾದಿಮನಿ, ಗಂಗಪ್ಪ ವಡ್ಡರ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು. ಯೋಜನಾಧಿಕಾರಿ ನಾಗರಾಜ ಹದ್ಲಿ ಸ್ವಾಗತಿಸಿದರು, ಮೇಲ್ವಿಚಾರಕ ಅಮನ್ ವಂದಿಸಿದರು ಮತ್ತು ಜ್ಞಾನ ವಿಕಾಸ ಸಮನ್ವಯಾಧಿಕಾರಿ ರತ್ನಾ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ