ಬಾಗಲಕೋಟೆ: ಚರಂತಿಮಠ ಪರ ಭರ್ಜರಿ ಪ್ರಚಾರ; ಬಿಜೆಪಿ ಗೆಲುವು ಖಚಿತ – ಶ್ರೀರಾಮುಲು*

ಬಾಗಲಕೋಟೆ: ಚರಂತಿಮಠ ಪರ ಭರ್ಜರಿ ಪ್ರಚಾರ; ಬಿಜೆಪಿ ಗೆಲುವು ಖಚಿತ – ಶ್ರೀರಾಮುಲು

By Petkarmedia news desk| Bagalkot

ಬಾಗಲಕೋಟೆ: ಉಪಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಅಭ್ಯರ್ಥಿ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಮಾಜಿ ಸಚಿವ ಬಿ, ಶ್ರೀರಾಮುಲು ಅವರು, ಅಂಬಾಭವಾನಿ ದೇವಿಗೆ ಪೂಜೆ ಸಲ್ಲಿಸಿ ನಂತರ ಕಿಲ್ಲಾ ವಾರ್ಡ್‌ ನಂ. 11 ಹಾಗೂ 13  ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು.

ಪ್ರಚಾರದ ವೇಳೆ  ಮಾತನಾಡಿದ ಅವರು, ಚರಂತಿಮಠ ಜನಪ್ರೀಯ ನಾಯಕರು ಆಗಿದ್ದು, ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಮನೆಮನೆ ಪ್ರಚಾರಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, “ನಮಗೆ ನೂರಕ್ಕೆ ನೂರು ವಿಶ್ವಾಸ ಇದೆ – ಬಿಜೆಪಿ ಅಭ್ಯರ್ಥಿ ಚರಂತಿಮಠ ಖಂಡಿತವಾಗಿ ಗೆಲ್ಲುತ್ತಾರೆ” ಎಂದು ಹೇಳಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದ ಜನತೆ ಸರ್ಕಾರದ ಮೇಲೆ ವಿಶ್ವಾಸ ಇಟ್ಟು ಹೆಚ್ಚಿನ ಸ್ಥಾನಗಳನ್ನು ನೀಡಿದ್ದಾರೆ. ಆದರೆ ಕಳೆದ ಎರಡು-ಮೂರು ವರ್ಷಗಳಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸರ್ಕಾರ ಜನತೆಗೆ ಸ್ಪಷ್ಟಪಡಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.

ಇವಿಎಂ ಕುರಿತಾಗಿ ಮಾತನಾಡಿದ ಅವರು, ಇತ್ತೀಚಿನ ಚುನಾವಣೆಯಲ್ಲಿ ಇದೇ ವ್ಯವಸ್ಥೆಯ ಮೂಲಕ ಬಹುಮತ ದೊರೆತಿದೆ. ಈ ಹಿನ್ನೆಲೆ ಇವಿಎಂ ವಿರುದ್ಧದ ಆರೋಪಗಳು ಅರ್ಥವಿಲ್ಲದವು ಎಂದು ಹೇಳಿದರು. ರಾಹುಲ್ ಗಾಂಧಿ ಅವರು ಈ ವಿಷಯವನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು ಎಂದರು.

ಡಿಸಿಎಂ ಡಿ. ಕೆ. ಶಿವಕುಮಾರ ಅವರ ಹೇಳಿಕೆಗಳಿಗೂ ಪ್ರತಿಕ್ರಿಯಿಸಿದ ಅವರು, ಸದನದಲ್ಲಿ ಬಳಸುವ ಭಾಷೆ ಮತ್ತು ವರ್ತನೆ ಕುರಿತು ಟೀಕಿಸಿದರು.

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಪ್ರಚಾರದ ವಿಚಾರಕ್ಕೂ ಪ್ರತಿಕ್ರಿಯಿಸಿದ ಶ್ರೀರಾಮುಲು, ಬಾದಾಮಿ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಬಗ್ಗೆ ಜನರಿಗೆ ತಿಳಿದಿದ್ದು, ಮತದಾರರು ಅದನ್ನಾಧರಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಅವರು ಪುನರುಚ್ಚರಿಸಿದರು.

ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ,ಮೋಹನ ಜಾದವ, ರಾಜು ನಾಯ್ಕರ, ಶ್ರೀನಾಥ ಸಜ್ಜನ,ಗುಂಡು ಶಿಂದೆ, ಎಂ. ಆರ್. ಶಿಂದೆ, ತಾನಾಜಿ ಜಮಖಂಡಿ, ದೀಲಿಪ್, ರಂಗನಾಥ ಜವಳಿ, ರಾಜು ಮೊರೆ, ಶಂಕರ ಕದಂ, ಆನಂದ ಕಲಾಲ, ಶ್ರೀಕಾಂತ ಪತ್ತಾರ, ರಮೇಶ ಕೋಟಿ, ರಾಜು ವಾಘ, ಮಹಾಂತೇಶ ಕೊಡಚಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಕಾಮೆಂಟ್‌ಗಳು