ಉಪ ಚುನಾವಣೆ : ಶೀಗಿಕೇರಿಯಲ್ಲಿ ಸ್ವೀಫ್ ಕಾರ್ಯಕ್ರಮ
By Petkarmedia news desk: Bagalkot
ಬಾಗಲಕೋಟೆ : ಮಾರ್ಚ 26 : ಮತದಾರರಲ್ಲಿ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಶೀಗಿಕೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಕರಪತ್ರಗಳನ್ನು ಹಂಚುವ ಮೂಲಕ ಮತದಾನ ಜಾಗೃತಿಗೆ ಗುರುವಾರ ಚಾಲನೆ ನೀಡಿದರು.
ಜಿಲ್ಲಾ ಸ್ವೀಫ್ ವತಿಯಿಂದ ಶೀಗಿಕೇರಿ ಗ್ರಾಮದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಚಾಲನೆ ನೀಡಿ ನಂತರ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಅವರು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಸಂಗಪ್ಪ ಅವರು ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ನಿರ್ಭಿತಿಯಿಂದ ಮತ ಚಲಾಯಿಸಬೇಕು. ಉತ್ತಮ ನಾಗರಿಕನಾಗುವ ಜೊತೆಗೆ ಉತ್ತಮ ಮತದಾರರಬೇಕು. ಆದ್ದರಿಂದ ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ತಿಳಿಸಿದರು.
ಜಿಲ್ಲಾ ಸ್ವೀಪ್ ಅಧ್ಯಕ್ಷರು ಹಾಗೂ ಜಿ.ಪಂ ಸಿಇಓ ಶಶಿಧರ ಕುರೇರ ಮಾತನಾಡಿ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ನೀಡಿದ್ದು, ಅರ್ಹ ಮತದಾರರು ಎಪ್ರೀಲ್ 9 ರಂದು ನಡೆಯಲಿರುವ ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ತಪ್ಪದೇ ತಮ್ಮ ತಮ್ಮ ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕು. ಯುಗಾದಿ, ದೀಪಾವಳಿ ಸೇರಿದಂತೆ ಅನೇಕ ಹಬ್ಬಗಳನ್ನು ಆಚರಿಸುವ ಹಾಗೆ ಚುನಾವಣೆಯನ್ನು ಹಬ್ಬದ ರೂಪದಲ್ಲಿ ಆಚರಿಸುವಂತೆ ಆಗಬೇಕು ಎಂದರು.
ಮತದಾನ ಯಾಕೆ ಬಹಳ ಮುಖ್ಯವೆಂದರೆ, ಒಂದು ಹಳ್ಳಿ, ಗ್ರಾಮ ಹಾಗೂ ಊರು ಅಭಿವೃದ್ದಿಯಾಗಬೇಕಾದರೆ, ಮೊದಲು ನಮ್ಮ ಹಕ್ಕನ್ನು ನಾವು ಪ್ರಾಮಾಣಿಕವಾಗಿ ಚಲಾಯಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕಾಗುತ್ತದೆ. ಪಾಲ್ಗೊಂಡಾಗ ಮಾತ್ರ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪವಿತ್ರವಾಗಿದ್ದು, ತಪ್ಪದೇ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕೆಂದು ತಿಳಿಸಿದರು.
ಪ್ರಾರಂಭದಲ್ಲಿ ಶೀಗಿಕೇರಿ ಗ್ರಾಮ ಪಂಚಾಯತಿ ಆವರಣದಲ್ಲಿ ನೆರೆದ ಗ್ರಾಮಸ್ಥರಿಗೆ ಹಾಗೂ ನೆರೆದ ಮಹಿಳೆಯರಿಗೆ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಜಿ.ಪಂ ಸಿಇಓ ಶಶಿಧರ ಕುರೇರ ಮತದಾನ ಜಾಗೃತಿಯ ಕರಪತ್ರಗಳನ್ನು ವಿತರಣೆ ಮಾಡಿ ತಮ್ಮದೇ ಮತದಾನ ಮಾಡುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿ.ಪ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ಜಿ.ಪಂ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ಬಾಗಲಕೋಟೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾಂವಿ, ತಾ.ಪಂ ಆಡಳಿತಾಧಿಕಾರಿ ಹಾಗೂ ತಾಲೂಕಾ ಸಮಾಜ ಕಲ್ಯಾಣಾಧಿಕಾರಿ ರವಿ ಇದ್ದಲಗಿ, ಶೀಗಿಕೇರಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಸುರೇಶ ನಾಯಕ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ