ಬಾಗಲಕೋಟೆ: ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಫರ್ನಿಚರ್ ಅಂಗಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಜಮಖಂಡಿ ಪಟ್ಟಣದ ಹೂರ ವಲಯದಲ್ಲಿ ಇರುವ ಸಾಧಿಕ್ ಅಲಗೂರ್ ಅವರಿಗೆ ಸೇರಿದ ಫರ್ನಿಚರ್ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಅಂಗಡಿಯಲ್ಲಿ ಮನೆಯ ಅಲಂಕಾರಿಕ ವಸ್ತುಗಳು, ಸೋಫಾ, ಬೆಡ್ ಹಾಗೂ ಐಶಾರಾಮಿ ಕುರ್ಚಿಗಳಂತಹ ಫರ್ನಿಚರ್ ಸಾಮಗ್ರಿಗಳು ಮಾರಾಟವಾಗುತ್ತಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಅಂಗಡಿಯನ್ನು ಆವರಿಸಿತು.
ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿಯಲ್ಲಿದ್ದ ಹೆಚ್ಚಿನ ಫರ್ನಿಚರ್ ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಅವರ ಪ್ರಯತ್ನದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.
ಈ ಸಂಬಂಧ ಜಮಖಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ