ಬೀಳಗಿ:ಕರ್ನಾಟಕದ ಹೆಮ್ಮೆ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆ 2024-25ನೇ ಸಾಲಿನಲ್ಲಿ ಭರ್ಜರಿ ಸಾಧನೆ ಮಾಡಿದೆ. ಸಂಸ್ಥೆಯು ಒಟ್ಟು ರೂ.1,342 ಕೋಟಿ ವಹಿವಾಟು ನಡೆಸಿ, ರೂ.436 ಕೋಟಿ ಲಾಭ ಗಳಿಸಿದೆ.
ಈ ಹಿನ್ನೆಲೆಯಲ್ಲಿ ಕಂಪನಿಯು ರಾಜ್ಯ ಸರ್ಕಾರಕ್ಕೆ ರೂ.97.25 ಕೋಟಿಗಳ ಲಾಭಾಂಶ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ.5 ಕೋಟಿ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.
ಈ ಚೆಕ್ ಅನ್ನು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷರಾದ ಜೆ.ಟಿ. ಪಾಟೀಲ್ ಅವರು ಮುಖ್ಯಮಂತ್ರಿ ಅವರಿಗೆ ನೀಡಿದರು.
ಹಟ್ಟಿ ಗಣಿ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ದ ಜೆ.ಟಿ. ಪಾಟೀಲ್ ಅವರ ಕಾರ್ಯಕ್ಷಮತೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ