ಬಾಗಲಕೋಟ ಭ್ರಷ್ಟಾಚಾರ ಕೂಪ ಬಿಟಿಡಿಎ: ಬಾಂಢಗೆ

ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ)ದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಘನಶ್ಯಾಮ ಭಾಂಡಗೆ ಆರೋಪಿಸಿದರು.

ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟಿಡಿಎಯಲ್ಲಿ ಹಲವು ವರ್ಷಗಳಿಂದ ಮುಳುಗಡೆ ಸಂತ್ರಸ್ತರನ್ನು ಅಧಿಕಾರಿಗಳು ಗೋಳಾಡಿಸುತ್ತಿದ್ದಾರೆ ಎಂದು ಹೇಳಿದರು. ಇ-ಖಾತಾ ಆನ್‌ಲೈನ್ ಮೂಲಕ ಆಗದೇ ಇರುವುದರಿಂದ ಸಂತ್ರಸ್ತರಿಗೆ ಭಾರೀ ತೊಂದರೆ ಆಗುತ್ತಿದೆ. ಸಾವಿರಾರು ಜನರಿಗೆ ಇ-ಖಾತಾ ಮಾಡಿಸಿದರೆ ಮುಂದಿನ ಕ್ರಮಕ್ಕೆ ಅನುಕೂಲವಾಗುತ್ತದೆ, ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.

ಸಂತ್ರಸ್ತರನ್ನು ಅನಗತ್ಯವಾಗಿ ಅಲೆದಾಡಿಸುವುದೇ ಅಧಿಕಾರಿಗಳ ಕೆಲಸವಾಗಿದ್ದು, ಬಿಟಿಡಿಎ ಆರಂಭವಾದಾಗಿನಿಂದಲೂ ಜನಪ್ರತಿನಿಧಿಗಳ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿದೆ. ಯಾವುದೇ ಜನಪ್ರತಿನಿಧಿಗಳು ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದರು.

ಮುಖ್ಯಮಂತ್ರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂದೀಪ್ ಬಾಸುತಕರ ಹಾಗೂ ಭೀಮಶಿ ಪೂಜಾರ ಉಪಸ್ಥಿತರಿದ್ದರು.

ಕಾಮೆಂಟ್‌ಗಳು