ಜಮಖಂಡಿ: ಜಂಬಗಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಶಂಕೆ; ಯುವಕನಿಗಾಗಿ ಶೋಧ ಕಾರ್ಯ

ಜಮಖಂಡಿ: ಜಮಖಂಡಿ ತಾಲ್ಲೂಕಿನ ಜಂಬಗಿ ಸೇತುವೆ ಮೇಲಿಂದ ವ್ಯಕ್ತಿಯೋರ್ವ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಸೇತುವೆ ಬಳಿ ಬೈಕ್ ಹಾಗೂ ಮೊಬೈಲ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಮಖಂಡಿ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾದ ವ್ಯಕ್ತಿಯನ್ನು ರಮೇಶ್ ಸೊರಗಾಂವಿ (28) ಎಂದು ಗುರುತಿಸಲಾಗಿದೆ. ಅವರು ಜಮಖಂಡಿ ತಾಲ್ಲೂಕಿನ ಹುಲ್ಯಾಳ ಗ್ರಾಮದ ನಿವಾಸಿಯಾಗಿದ್ದಾರೆ.

ಘಟನೆಯ ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದು, ವ್ಯಕ್ತಿಯ ಪತ್ತೆಗಾಗಿ ಮುಂದಿನ ಕ್ರಮಗಳು ಮುಂದುವರಿದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮೆಂಟ್‌ಗಳು