ಜಮಖಂಡಿ:ತಾಲೂಕಿನ ಜಂಬಗಿ ಕೆ.ಡಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಸ್ಥಳಕ್ಕೆ ಮಾಜಿ ಶಾಸಕ ಆನಂದ ನ್ಯಾಮಗೌಡ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದರು. ಅಲ್ಲದೆ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳಿಗೆ ಚಿರತೆಯನ್ನು ಶೀಘ್ರವಾಗಿ ಹಿಡಿಯುವ ಕಾರ್ಯಾಚರಣೆಯನ್ನು ತ್ವರಿತಗೊಳಿಸಲು ಸೂಚಿಸಿದರು.
ರೈತರ ಸಹಕಾರ ಹಾಗೂ ಅಧಿಕಾರಿಗಳ ಶ್ರಮದ ಫಲವಾಗಿ ಇಂದು ಚಿರತೆ ಯಶಸ್ವಿಯಾಗಿ ಬೊನಿಗೆ ಸೇರಿದೆ. ಈ ಕಾರ್ಯಾಚರಣೆಯಲ್ಲಿ ಶ್ರಮಿಸಿದ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಎಲ್ಲಾ ಅಧಿಕಾರಿಗಳಿಗೆ ಹಾಗೂ ಜನಪ್ರಿಯ ನಾಯಕರಾದ ಆನಂದ ನ್ಯಾಮಗೌಡ ಸಾಹೇಬರಿಗೆ ಜಂಬಗಿ ಕೆ.ಡಿ ಗ್ರಾಮದ ಸಮಸ್ತ ಗ್ರಾಮಸ್ಥರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ