ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್ ಬೆಂಬಲಿಸಿ: ತಿಮ್ಮಾಪೂರ

ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್ ಬೆಂಬಲಿಸಿ: ತಿಮ್ಮಾಪೂರ

By Petkarmedia news desk| Bagalkot

ಬಾಗಲಕೋಟೆ:: ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ನೆರವಾದ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ನಗರದ ವಿದ್ಯಾಗಿರಿ ಪ್ರದೇಶದಲ್ಲಿ ಪ್ರಚಾರ ನಡೆಸಿದ ಅವರು, ಎಲ್ಲ ವರ್ಗಗಳ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದೆ. ಎಚ್.ವೈ.ಮೇಟಿ ಅವರ ಸೇವೆಯನ್ನು ಅವರ ಪುತ್ರ ಉಮೇಶ ಮೇಟಿ ಮುಂದುವರಿಸಲಿದ್ದಾರೆ ಎಂದು ಹೇಳಿದರು.

ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಿದ ಅವರು, ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಬೊಮ್ಮಣಗಿಯಲ್ಲಿ ಕಾಂಗ್ರೆಸ್ ಸೇರ್ಪಡೆ

ಬೊಮ್ಮಣಗಿ ಗ್ರಾಮದಲ್ಲಿ ಉಮೇಶ ಮೇಟಿ ನೇತೃತ್ವದ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.


ಕಾಮೆಂಟ್‌ಗಳು