ಲೋಕಾಪುರದಲ್ಲಿ KSRTC ಬಸ್ ಅಪಘಾತ; ವಿದ್ಯುತ್ ಕಂಬಕ್ಕೆ ಡಿಕ್ಕಿ, ತಪ್ಪಿದ ದುರಂತ
By Petkarmedia Desk: Bagalkot
ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.
ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಿಂದ ವಾಪಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಂಬ ಮುರಿದು ಬಿದ್ದಿದೆ.
ಡಿಕ್ಕಿಯಾಗುತ್ತಿದ್ದಂತೆಯೇ ವಿದ್ಯುತ್ ಸಂಪರ್ಕ ಕಡಿತಗೊಂಡ ಕಾರಣ ದೊಡ್ಡ ದುರಂತ ತಪ್ಪಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಬಸ್ಸಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಇನ್ನುಳಿದ ಸುಮಾರು 20 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ