ಬಾಗಲಕೋಟೆ: RSS ಶತಮಾನೋತ್ಸವದ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಭಾನುವಾರ ಭವ್ಯ ಹಿಂದೂ ಸಮ್ಮೇಳನ ಹಾಗೂ ಶೋಭಾಯಾತ್ರೆ ವಿಜೃಂಭಣೆಯಿಂದ ನಡೆಯಿತು.
ನಗರದ ವಿವಿಧ ಭಾಗಗಳಿಂದ ಸಾವಿರಾರು ಕಾರ್ಯಕರ್ತರು ಹಾಗೂ ಭಕ್ತರು ಭಾಗವಹಿಸಿ ಧಾರ್ಮಿಕ ಘೋಷಣೆಗಳೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಶೋಭಾಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ವಿವಾದಿತ ಪಂಕಾ ಮಸೀದಿ ಮಾರ್ಗವಾಗಿಯೇ ಸಾಗಿದ್ದು ವಿಶೇಷ ಗಮನ ಸೆಳೆಯಿತು. ಭದ್ರತಾ ದೃಷ್ಟಿಯಿಂದ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ನಗರಾದ್ಯಂತ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಧಿಕಾರಿಗಳು ನಿಗಾವಹಿಸಿದ್ದು, ಕಾರ್ಯಕ್ರಮ ಶಾಂತಿಯುತವಾಗಿ ನೆರವೇರಿತು. ವಿವಿಧ ಹಿಂದೂ ಸಂಘಟನೆಗಳ ಮುಖಂಡರು, ಧಾರ್ಮಿಕ ನಾಯಕರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ