ಬಾಗಲಕೋಟೆ:ಸಿಎಂ Siddaramaiah – ಉಸ್ತುವಾರಿ ಸಚಿವ R. B. Timmapur ಅವರಿಗೆ ಹೊಳಬಸು ಶೆಟ್ಟರ ವಿಶೇಷ ಮನವಿ

ಬಾಗಲಕೋಟೆ: ಬರಲಿರುವ ರಾಜ್ಯ ಬಜೆಟ್‌ನಲ್ಲಿ ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ಮೀಸಲಿಡುವಂತೆ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಸಂಚಾಲಕರೂ ಆದ ಕಾಂಗ್ರೆಸ್ ಮುಖಂಡ ಹೊಳಬಸು ಶೆಟ್ಟರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. 

ಬೆಂಗಳೂರಿನಲ್ಲಿ ಮುಖ್ಯಮಂತ್ರಿ Siddaramaiah ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವ R. B. Timmapur ಅವರನ್ನು ಭೇಟಿ ಮಾಡಿ ವಿವಿಧ ಯೋಜನೆಗಳ ಪಟ್ಟಿಯನ್ನು ಒಪ್ಪಿಸಿದ್ದಾರೆ.

ಪ್ರಮುಖ ಮನವಿಗಳು:

*ಬಾಗಲಕೋಟೆ ನಗರದಲ್ಲಿ ಜಗಜ್ಯೋತಿ ಬಸವೇಶ್ವರ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ನಿರ್ಮಾಣ

*ಗುಡ್ಡದ ಮಲ್ಲಾಪುರ ಹಾಗೂ Aihole ಸಮಗ್ರ ಅಭಿವೃದ್ಧಿ

*ನವನಗರ ಮತ್ತು ಅಮೀನಗಡದಲ್ಲಿ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯ ಸ್ಥಾಪನೆ

*ಬಾಗಲಕೋಟೆ ನಗರ ಸೇರಿ ನವನಗರ, ಅಮೀನಗಡ, ಕಮತಗಿ, ಶಿರೂರ ಪಟ್ಟಣಗಳ ಮೂಲಸೌಕರ್ಯ ಅಭಿವೃದ್ಧಿಗೆ ₹150 ಕೋಟಿ ವಿಶೇಷ ಅನುದಾನ

*ದೇಶದಲ್ಲೇ ವಿಶಿಷ್ಟ ಸ್ಥಾನ ಹೊಂದಿರುವ ಬಾಗಲಕೋಟೆ ಹೋಳಿ ಆಚರಣೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಾರ್ಷಿಕ ಪ್ರೋತ್ಸಾಹಧನ

*ಗುಳೇದಗುಡ್ಡದಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಾಣ

*ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಒತ್ತು

ಐತಿಹಾಸಿಕ ರಾಷ್ಟ್ರೀಯ ಪ್ರವಾಸಿ ತಾಣವಾದ Aiholeಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಗ್ರಾಮ ಸ್ಥಳಾಂತರ ಹಾಗೂ ಮೂಲಸೌಕರ್ಯ ವಿಸ್ತರಣೆ ಕುರಿತು ವಿಶೇಷ ಯೋಜನೆ ರೂಪಿಸಬೇಕು ಎಂದು ಶೆಟ್ಟರ ಒತ್ತಾಯಿಸಿದ್ದಾರೆ. ಸಣ್ಣ ನೀರಾವರಿ ಇಲಾಖೆಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೂ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು ಎಂದು ಮನವಿ ಮಾಡಿದ್ದಾರೆ.

ಹೋಳಿ ಆಚರಣೆಗೆ ಪ್ರೋತ್ಸಾಹ

ಕೊಲ್ಕತ್ತ ಹೊರತುಪಡಿಸಿದರೆ ಬಾಗಲಕೋಟೆಯ ಹೋಳಿ ಆಚರಣೆ ತನ್ನದೇ ಆದ ವೈಶಿಷ್ಟ್ಯ ಹೊಂದಿದೆ. ಬಣ್ಣದ ಬಂಡಿಗಳು, ಸೋಗಿನ ಬಂಡಿಗಳಂತಹ ಸಂಸ್ಕೃತಿಯ ಸಂರಕ್ಷಣೆಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿಶೇಷ ನೆರವು ನೀಡಬೇಕು. ಈ ಮೂಲಕ ಸ್ಥಳೀಯ ಸಂಸ್ಕೃತಿಗೆ ಉತ್ತೇಜನ ಸಿಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ–ಕ್ರೀಡೆಗೆ ಆದ್ಯತೆ

ನವನಗರ ಮತ್ತು ಅಮೀನಗಡದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಸ್ಥಾಪನೆ ಮಾಡುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು. ವಿಶ್ವಪ್ರಸಿದ್ಧ ಗುಳೇದಗುಡ್ಡ ಖಣ ಪ್ರದೇಶದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ತಾಲೂಕು ಕ್ರೀಡಾಂಗಣ ನಿರ್ಮಾಣ ಅಗತ್ಯವಿದೆ ಎಂದು ಆಗ್ರಹಿಸಿದ್ದಾರೆ.

“ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರದ ಹಲವು ಮಹತ್ವದ ಯೋಜನೆಗಳಿಗೆ ಬಜೆಟ್‌ನಲ್ಲಿ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿಗಳು ಹಾಗೂ ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದೇನೆ. ದಿ. ಎಚ್. ವೈ. ಮೇಟಿ ಅವರ ಕನಸಿನ ಯೋಜನೆಗಳನ್ನು ಸಾಕಾರಗೊಳಿಸುವುದು ನಮ್ಮ ಗುರಿ,”

ಹೊಳಬಸು ಷ. ಶೆಟ್ಟರ, ಕಾಂಗ್ರೆಸ್ ಮುಖಂಡರು.

ಕಾಮೆಂಟ್‌ಗಳು