ಉಮೇಶ್ ಮೇಟಿ ಗೆಲುವು ಬಾಗಲಕೋಟೆಯ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿದೆ:ಆನಂದ್ ನ್ಯಾಮಗೌಡ

ಉಮೇಶ್ ಮೇಟಿ ಗೆಲುವು ಬಾಗಲಕೋಟೆಯ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿದೆ:ಆನಂದ್ ನ್ಯಾಮಗೌಡ 

By petkarmedia news desk: Bagalkot

ಬಾಗಲಕೋಟೆ: ಉಪಚುನಾವಣೆಯ ಹಿನ್ನೆಲೆ ನೀಲಾನಗರ ತಾಂಡಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ನಾಯಕ ಆನಂದ್ ನ್ಯಾಮಗೌಡ ಮಾತನಾಡಿ, ಗ್ಯಾರಂಟಿ ಯೋಜನೆಗಳ ಸಾಧನೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಬೆಂಬಲ ನೀಡುವಂತೆ  ಮನವಿ ಮಾಡಿದರು .

ಸಭೆಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷ ಎಲ್ಲ ವರ್ಗದ ಜನರನ್ನು ಸಮಾನವಾಗಿ ಕಾಣುವ ಪಕ್ಷವಾಗಿದೆ. ಬಡವರು, ಮಹಿಳೆಯರು ಹಾಗೂ ಯುವಕರಿಗಾಗಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ,” ಎಂದು ಹೇಳಿದರು.

ಶಕ್ತಿ ಯೋಜನೆ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 3.5 ಕೋಟಿ ಮಹಿಳೆಯರು ಗ್ಯಾರಂಟಿ ಯೋಜನೆ ಸೌಲಭ್ಯ ಪಡೆಯುತ್ತಿದ್ದಾರೆ. ಇದರಿಂದ ಮಹಿಳೆಯರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ದೊರೆಯುತ್ತಿದೆ.

ಯುವನಿಧಿ ಯೋಜನೆ ಕುರಿತು ಅವರು, “ಉದ್ಯೋಗವಿಲ್ಲದ ಯುವಕರಿಗೆ ಧೈರ್ಯ ತುಂಬುವ ಉದ್ದೇಶದಿಂದ ತಿಂಗಳಿಗೆ ₹1500 ಮತ್ತು ₹3000 ಸಹಾಯಧನ ನೀಡಲಾಗುತ್ತಿದೆ,” ಎಂದು ಹೇಳಿದರು. ಗೃಹಜ್ಯೋತಿ ಯೋಜನೆಯ ಮೂಲಕ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಅನ್ನಭಾಗ್ಯ ಸೇರಿದಂತೆ ಇತರೆ ಯೋಜನೆಗಳು ಜನರ ಬದುಕಿಗೆ ಆಧಾರವಾಗಿದೆ.

ಪಂಚ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ವರ್ಷಕ್ಕೆ ಸುಮಾರು ₹58,000 ಕೋಟಿ ವೆಚ್ಚ ಮಾಡುತ್ತಿದ್ದು, ಬಡಜನರಿಗೆ ನೇರ ನೆರವು ನೀಡುತ್ತಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪ್ರಮುಖ ಸಾಧನೆ ಎಂದು ಉಲ್ಲೇಖಿಸಿದರು.

ದಿವಂಗತ ಎಚ್‌.ವೈ. ಮೇಟಿ ಅವರ ಸೇವೆಯನ್ನು ಸ್ಮರಿಸಿದ ಅವರು, “ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಆರಂಭಿಸಿದ್ದರು. ಅವುಗಳಲ್ಲಿ ಕೆಲವು ಪೂರ್ಣಗೊಳ್ಳಲು ಸಾಧ್ಯವಾಗಿಲ್ಲ. ಈಗ ಆ ಕೆಲಸಗಳನ್ನು ಪೂರ್ಣಗೊಳಿಸುವ ಜವಾಬ್ದಾರಿ ನಮ್ಮದಾಗಿದೆ,” ಎಂದು ಹೇಳಿದರು.

ಉಮೇಶ್ ಮೇಟಿ ಅವರು ತಮ್ಮ ತಂದೆಯವರ ದಾರಿಯಲ್ಲಿ ನಡೆದು, ಕ್ಷೇತ್ರದ ಅಭಿವೃದ್ಧಿಗೆ ಮುಂದಾಗುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು , “ಅವರನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಬೇಕು,” ಎಂದು ಮನವಿ ಮಾಡಿದರು.ಕೊನೆಯಲ್ಲಿ, “ಉಮೇಶ್ ಮೇಟಿ ಗೆಲುವು ಬಾಗಲಕೋಟೆಯ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿದೆ,” ಎಂದು ಹೇಳಿದರು.ಈಸಂದರ್ಭದಲ್ಲಿ ಶಿವಾನಂದ ಪಾಟೀಲ, ಅಜಯಕುಮಾರ ಸರನಾಯಕ, ಆನಂದ ನ್ಯಾಮಗೌಡ, ಅನಂತ್ ನಾಯಕ,ಆದರ್ಶ ಯಲ್ಲಪ್ಪ, ಬಸವಂತಪ್ಪ ಮೇಟಿ, ಬಲರಾಮ ಪವಾರ್, ಹಾಗೂ ಇತರ ಮುಖಂಡರು   ಉಪಸ್ಥಿತರಿದ್ದರು

ಕಾಮೆಂಟ್‌ಗಳು