ಫೋನ್ ಮೂಲಕ ಮತದಾರರಿಗೆ ಧನ್ಯವಾದತಿಳಿಸಿದ ಉಮೇಶ್ ಮೇಟಿ

ಫೋನ್ ಮೂಲಕ ಮತದಾರರಿಗೆ ಧನ್ಯವಾದತಿಳಿಸಿದ ಉಮೇಶ್ ಮೇಟಿ

By PetkarMedia news Desk| Bagalkot

ಬಾಗಲಕೋಟೆ: ವಿಧಾನಸಭಾ ಉಪಚುನಾವಣೆ ಏಪ್ರಿಲ್ 9ರಂದು ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು ಸಾರ್ವಜನಿಕರು ಹಾಗೂ ಕಾರ್ಯಕರ್ತರಿಗೆ ಫೋನ್ ಮೂಲಕ ಸಂಪರ್ಕಿಸಿ ಧನ್ಯವಾದಗಳನ್ನು ತಿಳಿಸುತ್ತಿದ್ದಾರೆ.

ಮತದಾನದ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಯಶಸ್ವಿಗೊಳಿಸಿದ ಮತದಾರರಿಗೆ ಅವರು ಕೃತಜ್ಞತೆ ವ್ಯಕ್ತಪಡಿಸಿದರು. ಜೊತೆಗೆ ಚುನಾವಣಾ ಪ್ರಚಾರದ ಅವಧಿಯಲ್ಲಿ ಪಕ್ಷದ ಪರವಾಗಿ ಶ್ರಮಿಸಿದ ಕಾರ್ಯಕರ್ತರು, ಮುಖಂಡರು ಹಾಗೂ ಬೆಂಬಲಿಗರಿಗೂ ಅಭಿನಂದನೆ ಸಲ್ಲಿಸಿದರು.

ಪ್ರತಿಯೊಬ್ಬ ಮತದಾರರ ಬೆಂಬಲವೇ ತಮ್ಮ ಶಕ್ತಿಯಾಗಿದ್ದು, ಜನರ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿರುವುದಾಗಿ ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಜನರೊಂದಿಗೆ ನಿಕಟ ಸಂಪರ್ಕ ಕಾಯ್ದುಕೊಂಡು, ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ ಉಮೇಶ್ ಮೇಟಿ ಅವರು, ಮತದಾರರ ಆಶೀರ್ವಾದವೇ ತಮ್ಮಿಗೆ ದೊಡ್ಡ ಪ್ರೇರಣೆ ಎಂದು ಹೇಳಿದರು.

ಕಾಮೆಂಟ್‌ಗಳು