ತಾಲೂಕು ಪಂಚಾಯತ್ ಪದಾಧಿಕಾರಿಗಳ ಆಯ್ಕೆ ಸಭೆ
By PetkarMedia news desk: Bagalkot
ಮುಧೋಳ: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2026–29ರ ಅವಧಿಗೆ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.
ಸಭೆಯಲ್ಲಿ ಬಾಗಲಕೋಟೆ ಜಿಲ್ಲಾ ರಾಜ್ಯ ಪರಿಷತ್ ಸದಸ್ಯರಾದ ಎಸ್.ವೈ. ನರಸನ್ನವರ ಅವರ ಸಮ್ಮುಖದಲ್ಲಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು. ಸಭೆಯಲ್ಲಿ ಎಲ್ಲರ ಸರ್ವಾನುಮತದಿಂದ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ತಾಲೂಕು ಪಂಚಾಯತ್‌ನ ನೂತನ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ರವೀಂದ್ರ ಮಹೇಂದ್ರಕರ್, ಅಧ್ಯಕ್ಷರಾಗಿ ರೋಹಿತ್ ಇಟಕನ್ನವರ, ಉಪಾಧ್ಯಕ್ಷರಾಗಿ ಕವಿತಾ ಮಂಟೂರ, ಪ್ರಧಾನ ಕಾರ್ಯದರ್ಶಿಯಾಗಿ ಮುತ್ತಣ್ಣ ಗುರವ, ಖಜಾಂಚಿಯಾಗಿ ಮಲ್ಲಿಕಾರ್ಜುನ ಹಾವರಗಿ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಮಂಜುನಾಥ ಕರಿಗೌಡರ ಆಯ್ಕೆಯಾಗಿದ್ದಾರೆ.
ಇದೇ ವೇಳೆ ಸದಸ್ಯರಾಗಿ ಶ್ರೀಲ್ಪಶ್ರೀ ಟಿ., ರವಿಕುಮಾರ್ ಬೇಟಗೇರಿ, ಮನೋಹರ ಬ್ಯಾಕೋಡ ಹಾಗೂ ವಿವೇಕ ಬಿರಾದಾರ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮುಧೋಳ ತಾಲೂಕು ನರೇಗಾ ಸಹಾಯಕ ನಿರ್ದೇಶಕರು, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರು ಸೇರಿದಂತೆ ತಾಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ