ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸರಳ ಆಚರಣೆ
By PetkarMedia news desk| Bagalkot
ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ ಹಿನ್ನಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರವರ ಪುತ್ಥಳಿಗೆ ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಹಾಗೂ ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ ಸೇರಿದಂತೆ ಇತರೆ ಅಧಿಕಾರಿಗಳು ಹೂಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, , ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ ಚವ್ಹಾಣ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಜಿ.ಪಂ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಸೇರಿದಂತೆ ಇತರರು ಉಪಸ್ಥಿತರಿದ್

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ