ಬಾಗಲಕೋಟೆ: ಗೌರವ ಡಾಕ್ಟರೇಟ್‌ಗೆ ಮೂವರಿಗೆ ಆಯ್ಕೆ
BY PETKARMEDIA NEWS DESK | Jamakhandi
ಬಾಗಲಕೋಟೆ: ಇಳಕಲ್ ವಿಜಯ ಮಹಾಂತೇಶ ಸಂಸ್ಥಾನದ ಗುರುಮಹಾಂತ ಸ್ವಾಮೀಜಿ, ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಎಸ್. ನಂಬಿ ನಾರಾಯಣನ್ ಹಾಗೂ ಉದ್ಯಮಿ ಮಹೇಶ ಬೆಲ್ಲದ ಅವರನ್ನು ಜಮಖಂಡಿಯ ಬಾಗಲಕೋಟ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.
ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಆನಂದ ದೇಶಪಾಂಡೆ ಅವರು ಮಾಹಿತಿ ನೀಡಿದರು.
ಗುರುಮಹಾಂತ ಸ್ವಾಮೀಜಿ ಅವರು ದಾರ್ಶನಿಕರಾಗಿ ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಸಾಮಾಜಿಕ ಸುಧಾರಣೆಗೆ ನೀಡಿದ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.
ಇನ್ನೊಂದೆಡೆ, ಎಸ್. ನಂಬಿ ನಾರಾಯಣನ್ ಅವರಿಗೆ ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ನೀಡಿದ ಮಹತ್ವದ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗುತ್ತಿದೆ.
ಉದ್ಯಮಿ ಮಹೇಶ ಬೆಲ್ಲದ ಅವರಿಗೆ ಟೆಕ್ ಉದ್ಯಮ, ಸಾಮಾಜಿಕ ಸೇವೆ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಿರ್ಧರಿಸಲಾಗಿದೆ.
ಏಪ್ರಿಲ್ 24 ರಂದು ಬೆಳಿಗ್ಗೆ 11:30ಕ್ಕೆ ಜರುಗುವ ಮೊದಲ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಜಮಖಂಡಿಯ ಬಿಎಲ್‌ಡಿಇ ದರ್ಬಾರ್ ಹಾಲ್‌ನಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ