ಹಗರಣ-ಕಾಲಹರಣ ಕಾಂಗ್ರೆಸ್ ಸಾಧನೆ: ವಿಜಯೇಂದ್ರ ಟೀಕೆ ಅಭಿವೃದ್ಧಿ ಭರವಸೆ ನೀಡಿ ಬಿಜೆಪಿ ಮತಯಾಚನೆ
By PetkarMedia news desk| Bagalkot
ಬಾಗಲಕೋಟೆ: ಉಪಚುನಾವಣೆ ಹಿನ್ನಲೆಯಲ್ಲಿ ನಾಯನೇಗಲಿ ಗ್ರಾಮದಲ್ಲಿ ನಡೆದ ಭರ್ಜರಿ ರೋಡ್ ಶೋ ಹಾಗೂ ಪ್ರಚಾರ ಸಭೆಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಅಭಿವೃದ್ಧಿ ಭರವಸೆಗಾಗಿ ಬಿಜೆಪಿಗೆ ಬೆಂಬಲ ನೀಡಬೇಕು ಎಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದರು.
ಸಭೆಯನ್ನು ಸಂಪ್ರದಾಯಬದ್ಧವಾಗಿ ಡೊಳ್ಳು ಭಾರಿಸುವ ಮೂಲಕ ಉದ್ಘಾಟಿಸಿದ ವಿಜಯೇಂದ್ರ, “ಕಾಂಗ್ರೆಸ್ ಸರ್ಕಾರ ಹಗರಣ ಮತ್ತು ಕಾಲಹರಣದಲ್ಲೇ ತೊಡಗಿದೆ. ರಾಜ್ಯದ ಅಭಿವೃದ್ಧಿಗೆ ಅವರಿಂದ ಏನೂ ಸಾಧ್ಯವಿಲ್ಲ,” ಎಂದು ಆರೋಪಿಸಿದರು. ಹಾಲುಮತ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿಗೆ ಬಿಜೆಪಿ ಕೊಡುಗೆ ನೀಡಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಭಾಗಕ್ಕೆ ನೀಡಿದ ಅಭಿವೃದ್ಧಿ ಯೋಜನೆಗಳನ್ನು ಉಲ್ಲೇಖಿಸಿದ ಅವರು, ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ ವೇಗ ಪಡೆದಿದೆ ಎಂದು ಹೇಳಿದರು. ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಬಹುಮತದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಮಾಜಿ ಸಚಿವ ಮುರಗೇಶ ನಿರಾಣಿ, ಸಂಸದ ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಮಾತನಾಡಿ, ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡುವಂತೆ ಕೋರಿದರು.
ನಾಯನೇಗಲಿಯಲ್ಲಿ ನಡೆದ ಶೋಭಾಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿ ಬಿಜೆಪಿ ಪರ ಘೋಷಣೆ ಕೂಗಿದರು. ಐನೂರಕ್ಕೂ ಹೆಚ್ಚು ಬೈಕ್‌ಗಳೊಂದಿಗೆ ಸುಮಾರು 3 ಕಿ.ಮೀ ದೂರ ರ್ಯಾಲಿ ನಡೆದಿದ್ದು, ಕೇಸರಿ ಧ್ವಜಗಳ ಹಾರಾಟದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ಕಂಡುಬಂತು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ