ಸಚಿವ ಸುಧಾಕರ ನಿಧನಕ್ಕೆ ಸಿಎಂ ಸಿದ್ದು ಸಂತಾಪ
By PetkarMedianews desk: Bangalore
ಬೆಂಗಳೂರು:ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕ ಡಿ.ಸುಧಾಕರ್ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಿ.ಸುಧಾಕರ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು.
ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ, ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಸುಧಾಕರ್ ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನ ಗಳಿಗೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ