ಬಾಗಲಕೋಟೆ ಯಲ್ಲಿ ಬಿಜೆಪಿ ಪ್ರಶಿಕ್ಷಣ ಮಹಾಭಿಯಾನಕ್ಕೆ ಚಾಲನೆ
By PetkarMedia news desk: badami
ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಮಹಾಕೂಟದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾದ “ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ” ಕಾರ್ಯಕ್ರಮಕ್ಕೆ ಕೇಂದ್ರ ಸಚಿವ Pralhad Joshi ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಂಡಿತ ದೀನದಯಾಳ ಉಪಾಧ್ಯಾಯರ ಆದರ್ಶಗಳನ್ನು ಪ್ರತಿಯೊಬ್ಬ ಕಾರ್ಯಕರ್ತರೂ ಅಳವಡಿಸಿಕೊಳ್ಳಬೇಕು. ಪಕ್ಷ ಸಂಘಟನೆ ಹಾಗೂ ದೇಶದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಕರೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, “ನೀಟ್ ವಿಶ್ವದ ಅತಿದೊಡ್ಡ ಪರೀಕ್ಷಾ ವ್ಯವಸ್ಥೆಯಾಗಿದ್ದು, ದೇಶದಲ್ಲಿ 23 ರಿಂದ 24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ. ಮುಂದಿನ ದಿನಗಳಲ್ಲಿ ಪರೀಕ್ಷೆಯನ್ನು ಆನ್‌ಲೈನ್ ಮೂಲಕ ನಡೆಸುವ ಬಗ್ಗೆ ಚಿಂತನೆ ನಡೆಯುತ್ತಿದೆ” ಎಂದು ಹೇಳಿದರು.
“ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷೆ ಮುಂದೂಡಿದರೆ ಸೀಟ್ ಸಿಗುವುದಿಲ್ಲ ಎಂದು ಭಾವಿಸಬಾರದು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ಕ್ರಮ ಕೈಗೊಂಡಿದೆ” ಎಂದು ಹೇಳಿದರು.
ಕಾಂಗ್ರೆಸ್ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, “ರಾಜಸ್ಥಾನದಲ್ಲಿ ಕಾಂಗ್ರೆಸ್ ಆಡಳಿತಾವಧಿಯಲ್ಲಿ 19 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ ನಡೆದಿತ್ತು. ಮೊದಲು ಕಾಂಗ್ರೆಸ್ ಕೆಪಿಎಸ್ಸಿ ವ್ಯವಸ್ಥೆಯನ್ನು ಸರಿಪಡಿಸಲಿ” ಎಂದು ಟೀಕಿಸಿದರು.
ಮಹಾಕೂಟೇಶ್ವರ ದೇವಸ್ಥಾನದಲ್ಲಿ ಎರಡು ದಿನಗಳ ಕಾಲ ಪ್ರಶಿಕ್ಷಣ ವರ್ಗ ನಡೆಯಲಿದ್ದು, ಕಾರ್ಯಕ್ರಮಕ್ಕೂ ಮುನ್ನ ಸಚಿವರು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಮಹಾಕೂಟದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು. ಈ ವೇಳೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಕುರಿತು ಮಾತನಾಡಿ, ಮುಂದಿನ ದಿನಗಳಲ್ಲಿ ನೀಟ್ ಪರೀಕ್ಷೆಯನ್ನು ಆನ್‌ಲೈನ್ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.
#Bagalkot #Badami #Mahakoota #PralhadJoshi #BJP #NEET #NEETExam #KarnatakaNews #BagalkotNews #PetkarMedia #ParashuPetkar

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ