ಆರ್.ಬಿ. ತಿಮ್ಮಾಪುರ ಕಣ್ಣೀರಿನ ಹಿಂದೆ ರಾಜಕೀಯ ಋಣ
By PetkarMedia news Desk: bagalkot
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಘೋಷಿಸಿದ ವೇಳೆ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಭಾವುಕರಾಗಿ ಕಣ್ಣೀರು ಹಾಕಿದರು. ಸತತ ಮೂರು ಚುನಾವಣೆಗಳಲ್ಲಿ ಸೋತಿದ್ದ ತಿಮ್ಮಾಪುರ ಅವರಿಗೆ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ತಿಗೆ ಅವಕಾಶ ಕಲ್ಪಿಸಿ ರಾಜಕೀಯ ಪುನರ್ಜನ್ಮ ನೀಡಿದ್ದರು.
ಬಳಿಕ ಸಚಿವ ಸ್ಥಾನವೂ ದೊರೆತಿತ್ತು. ತಮ್ಮ ರಾಜಕೀಯ ಜೀವನದ ಸಂಕಷ್ಟದ ಸಂದರ್ಭಗಳಲ್ಲಿ ಸಿದ್ದರಾಮಯ್ಯ ಬೆಂಬಲವಾಗಿ ನಿಂತಿದ್ದರಿಂದ ಅವರ ರಾಜೀನಾಮೆ ತಿಮ್ಮಾಪುರ ಅವರನ್ನು ಭಾವುಕರನ್ನಾಗಿಸಿದೆ ಎನ್ನಲಾಗಿದೆ.
ಇದೀಗ ಡಿ.ಕೆ. ಶಿವಕುಮಾರ ನೇತೃತ್ವದ ಹೊಸ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ತಿಮ್ಮಾಪುರ ಪ್ರಯತ್ನ ನಡೆಸಿದ್ದಾರೆ. ಆದರೆ ಅವರ ಇಲಾಖೆಯ ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಆರೋಪಗಳು ಸಚಿವ ಸ್ಥಾನಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ