ಭಾರಿ ಮಳೆಗೆ ಮನೆ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ

ಭಾರಿ ಮಳೆಗೆ ಮನೆ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ

By Petkar media news desk: Bagalkot

ಬಾಗಲಕೋಟೆ, ಜೂನ್ 7: ನಿನ್ನೆ ಸುರಿದ ಭಾರಿ ಮಳೆಯಿಂದ ಬಾಗಲಕೋಟೆ ನಗರದ ವಲ್ಲಭಾಯಿ ಚೌಕ್ ಸಮೀಪ ಬೀದಿಬದಿ ಹಣ್ಣಿನ ವ್ಯಾಪಾರಿ ಶಬ್ಬೀರ್ ಬಾಗವಾನ್ ಅವರ ಮನೆ ಕುಸಿದಿದೆ.


ಘಟನೆಯ ಮಾಹಿತಿ ತಿಳಿದು ವಿಧಾನ ಪರಿಷತ್ ಸದಸ್ಯರಾದ ಪಿ.ಎಚ್. ಪೂಜಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸಂಕಷ್ಟಕ್ಕೆ ಸಿಲುಕಿರುವ ಬಡ ವ್ಯಾಪಾರಿಗೆ ಸರ್ಕಾರದಿಂದ ಅಗತ್ಯ ನೆರವು ಹಾಗೂ ಸೌಲಭ್ಯಗಳನ್ನು ಶೀಘ್ರವಾಗಿ ಒದಗಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ಆಂಜನೇಯ ಕಾಗಿ, ಬಾಗಲಕೋಟ ಯೂನಿಯನ್ ಮಾರ್ಕೆಟ್ ಅಸೋಸಿಯೇಷನ್ ಅಧ್ಯಕ್ಷ ರವಿ ಕುಮಟಗಿ, ಪ್ರಧಾನ ಕಾರ್ಯದರ್ಶಿ ವಿರುಪಾಕ್ಷ ಅಮೃತಕರ, ಶ್ರೀನಿವಾಸ ಬಳ್ಳಾರಿ, ಮಕ್ತುಮಸಾಬ ದೊಡ್ಡಮನಿ, ಶೌಕತ್ ವಾಳದ ಹಾಗೂ ಇತರ ವ್ಯಾಪಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು