ಬಾಗಲಕೋಟೆ: ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ಕಾರ್ಯಕರ್ತರಿಗಾಗಿ ಎಸ್.ಐ.ಆರ್. (Special Intensive Revision) ಕುರಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್ ಎಸ್.ಐ.ಆರ್. ಪ್ರಕ್ರಿಯೆಯ ಕುರಿತು ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎಸ್.ಐ.ಆರ್. ಅನ್ನು ಕೇಂದ್ರ ಸರ್ಕಾರ ರಾಜಕೀಯ ಉದ್ದೇಶಗಳಿಗೆ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಗಳ ಕುರಿತು ಆತಂಕ ವ್ಯಕ್ತಪಡಿಸಲಾಯಿತು. ಪ್ರಜಾಪ್ರಭುತ್ವದ ಮೌಲ್ಯಗಳು, ಮತದಾರರ ಹಕ್ಕುಗಳು ಹಾಗೂ ಸಂವಿಧಾನಾತ್ಮಕ ಸಂಸ್ಥೆಗಳ ಸ್ವಾಯತ್ತತೆಯನ್ನು ಕಾಪಾಡುವುದು ಅತ್ಯಂತ ಮುಖ್ಯವಾಗಿದ್ದು, ಯಾವುದೇ ಪ್ರಕ್ರಿಯೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಬಾರದು ಎಂದು ಅಭಿಪ್ರಾಯ ವ್ಯಕ್ತವಾಯಿತು.
ಜನರು ಜಾಗೃತರಾಗಿ ತಮ್ಮ ಮತದಾನದ ಹಕ್ಕು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗೆ ಮುಂದಾಗಬೇಕೆಂದು ಕರೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಶಾಸಕ ಉಮೇಶ್ ಹುಲ್ಲಪ್ಪ ಮೇಟಿ, ಕೆಪಿಸಿಸಿ ಉಪಾಧ್ಯಕ್ಷ ಎಂ.ಬಿ. ಸೌದಾಗರ, ಪ್ರಚಾರ ಸಮಿತಿಯ ಜಿಲ್ಲಾ ಅಧ್ಯಕ್ಷ ನಾಗರಾಜ ಹಡ್ಲಿ ಸೇರಿದಂತೆ ಹಲವು ಮುಖಂಡರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಈ ವೇಳೆ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಪಕ್ಷದ ಸಿದ್ಧಾಂತಗಳನ್ನು ತಳಮಟ್ಟಕ್ಕೆ ತಲುಪಿಸುವುದು ಹಾಗೂ ಮುಂದಿನ ರಾಜಕೀಯ ಕಾರ್ಯಕ್ರಮಗಳ ಕುರಿತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಾಯಿತು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ