ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟೆಗೆರೆ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ಐದು ವರ್ಷದ ಬಾಲಕಿ ಹಾಗೂ ಆಕೆಯ ಅಜ್ಜಿಗೆ ಗಾಯಗಳಾದ ಘಟನೆ ನಡೆದಿದೆ.
ಗಾಯಗೊಂಡವರನ್ನು ಹರ್ಷಿತಾ (5) ಹಾಗೂ ಆಕೆಯ ಅಜ್ಜಿ ಶಿವಮ್ಮ ಎಂದು ಗುರುತಿಸಲಾಗಿದೆ.ತಟ್ಟೆಗೆರೆ ಗ್ರಾಮದಲ್ಲಿ ಮನೆಯ ಸಮೀಪ ಇದ್ದ ವೇಳೆ ಏಕಾಏಕಿ ಬಂದ ಚಿರತೆ ಹರ್ಷಿತಾ ಮತ್ತು ಶಿವಮ್ಮ ಅವರ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಇಬ್ಬರೂ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.ಘಟನೆಯಿಂದ ತಟ್ಟೆಗೆರೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮ ಸಮೀಪ ಚಿರತೆಗಳ ಓಡಾಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೂಡಲೇ ಕ್ರಮ ಕೈಗೊಂಡು ಚಿರತೆಯನ್ನು ಸೆರೆಹಿಡಿಯಬೇಕು ಹಾಗೂ ಗ್ರಾಮಸ್ಥರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ