ಬಾಗಲಕೋಟೆ: ಎಬಿವಿಪಿ 78ನೇ ಸಂಸ್ಥಾಪನಾ ದಿನ; ರಾಷ್ಟ್ರೀಯ ವಿದ್ಯಾರ್ಥಿ ದಿನ ಆಚರಣೆ

ಬಾಗಲಕೋಟೆ: ಎಬಿವಿಪಿ 78ನೇ ಸಂಸ್ಥಾಪನಾ ದಿನ; ರಾಷ್ಟ್ರೀಯ ವಿದ್ಯಾರ್ಥಿ ದಿನ ಆಚರಣೆ

ಬಾಗಲಕೋಟೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬಾಗಲಕೋಟೆ ಶಾಖೆ ವತಿಯಿಂದ ನಗರದ ಬಿವಿವಿಎಸ್ ಸಂಸ್ಥೆಯ ಎಸ್. ನಿಜಲಿಂಗಪ್ಪ ವೈದ್ಯಕೀಯ ಕಾಲೇಜಿನಲ್ಲಿ ಎಬಿವಿಪಿಯ 78ನೇ ಸಂಸ್ಥಾಪನಾ ದಿನದ ಅಂಗವಾಗಿ "ರಾಷ್ಟ್ರೀಯ ವಿದ್ಯಾರ್ಥಿ ದಿನ" ಕಾರ್ಯಕ್ರಮವನ್ನು ಸೋಮವಾರ ಆಚರಿಸಲಾಯಿತು.




ಕಾರ್ಯಕ್ರಮವನ್ನು ಎಬಿವಿಪಿಯ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಗೋವಿಂದ ನಾಯಕ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಂತ ಸಂಘಟನಾ ಕಾರ್ಯದರ್ಶಿ ವೆಂಕಟೇಶ ಡಾಂಗೆ, ಕೇಂದ್ರೀಯ ಕಾರ್ಯಸಮಿತಿ ಸದಸ್ಯ ಸಚಿನ ಕುಳಗೇರಿ, ಬಿವಿವಿಎಸ್ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಕುಮಾರಸ್ವಾಮಿ ಹಿರೇಮಠ, ವಿಭಾಗ ಸಂಘಟನಾ ಕಾರ್ಯದರ್ಶಿ ಹರ್ಷ ನಾಯಕ, ವಿಭಾಗ ಸಂಚಾಲಕ ಪ್ರಥಮೇಶ ವಾಗ್ಮೋಡಿ, ನಗರ ಅಧ್ಯಕ್ಷ ಬಸವರಾಜ ಕುಂಬಾರ, ಜಿಲ್ಲಾ ಸಂಚಾಲಕ ವಿಪುಲ ಪೆಟ್ಕರ ಹಾಗೂ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಕಲ್ಲಪ್ಪನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು