ಕಮತಗಿ–ಅಮೀನಗಡದಲ್ಲಿ ಜನತಾ ದರ್ಶನ: ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಉಮೇಶ್ ಹೆಚ್. ಮೇಟಿ
ಬಾಗಲಕೋಟೆ, ಜು. 10: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಹೆಚ್. ಮೇಟಿ ಅವರು ಶುಕ್ರವಾರ ಕಮತಗಿ ಹಾಗೂ ಅಮೀನಗಡ ಪಟ್ಟಣಗಳಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಜನತಾ ದರ್ಶನ ನಡೆಸಿದರು.
ಈ ಸಂದರ್ಭದಲ್ಲಿ ಸ್ಥಳೀಯರು ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್, ಮೂಲಸೌಕರ್ಯ ಹಾಗೂ ವಿವಿಧ ಇಲಾಖೆಗಳ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳ ಕುರಿತು ಮನವಿ ಸಲ್ಲಿಸಿದರು.
ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಶಾಸಕ ಉಮೇಶ್ ಮೇಟಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಸೂಚನೆ ನೀಡಿದರು. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಿ, ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ