ಮಹಿಳಾ ಅಭಿವೃದ್ಧಿ ಸಂಸ್ಥೆ ವಂಚನೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

 ಬೀಳಗಿಯ ದುರ್ಗಾದೇವಿ ಸಂಸ್ಥೆಯಿಂದ ಬೃಹತ್ ವಂಚನೆ

• ತನಿಖೆ ವೇಳೆ ₹43.40 ಲಕ್ಷ ವಂಚನೆ ಬೆಳಕಿಗೆ

• ಕಂಪ್ಯೂಟರ್, 200ಕ್ಕೂ ಹೆಚ್ಚು ರೆಜಿಸ್ಟರ್‌ಗಳು ವಶಕ್ಕೆ

• ಇಬ್ಬರು ಆರೋಪಿಗಳ ಬಂಧನ; ಒಂಬತ್ತರ ವಿರುದ್ಧ ಕೇಸ್

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಶ್ರೀ ದುರ್ಗಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂಸ್ಥೆಗೆ ಮಹಿಳೆಯರು ಮುತ್ತಿಗೆ ಹಾಕಿದ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿರುವ ಬೀಳಗಿ ಪೊಲೀಸರು, ಲಕ್ಷಾಂತರ ರೂಪಾಯಿ ವಂಚನೆಯನ್ನು ಪತ್ತೆಹಚ್ಚಿದ್ದಾರೆ. 

ದುರ್ಗಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿರುವ ಬೀಳಗಿ ಪೊಲೀಸರು, ಬರೋಬ್ಬರಿ 43 ಲಕ್ಷದ 40 ಸಾವಿರಕ್ಕೂ ಅಧಿಕ ರೂಪಾಯಿ ವಂಚನೆಯಾಗಿರುವುದನ್ನು ಪತ್ತೆಹಚ್ಚಿದ್ದಾರೆ. ಸಂಸ್ಥೆಯ ಮೇಲೆ ದಾಳಿ ನಡೆಸಿ 200ಕ್ಕೂ ಹೆಚ್ಚು ರೆಜಿಸ್ಟರ್ ಕಡತಗಳು, ರಸೀದಿ ಪುಸ್ತಕಗಳು ಹಾಗೂ ಕಂಪ್ಯೂಟರ್‌ಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗಿದೆ. ಪ್ರಕರಣದಲ್ಲಿ ಒಟ್ಟು 9 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, 8 ಜನರನ್ನು ವಿಚಾರಣೆಗೊಳಪಡಿಸಿ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಇನ್ನು ಈ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾಗಿರುವ ಸಾರ್ವಜನಿಕರು ತಕ್ಷಣವೇ ಸಂಬಂಧಪಟ್ಟ ದಾಖಲೆಗಳೊಂದಿಗೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕಂದಾಯ ಹಾಗೂ ಪೊಲೀಸ್ ಇಲಾಖೆ ಜಂಟಿ ಮನವಿ ಮಾಡಿದೆ.

ಕಾಮೆಂಟ್‌ಗಳು