ನಾಳೆ ಬಾದಾಮಿ ರೈಲು ನಿಲ್ದಾಣ ಉದ್ಘಾಟನೆ

ಬಾದಾಮಿ: ಬಾದಾಮಿ ರೈಲು ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮವು ಜುಲೈ 17ರಂದು (ಶುಕ್ರವಾರ) ಬಾದಾಮಿ ರೈಲು ನಿಲ್ದಾಣದಲ್ಲಿ ನಡೆಯಲಿದೆ.


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಸೇರಿದಂತೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಪುರಸಭೆ ಸದಸ್ಯರು, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರು, ವಿವಿಧ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಬಾದಾಮಿಯ ಅಭಿವೃದ್ಧಿಯ ದೃಷ್ಟಿಯಿಂದ ಈ ಕಾರ್ಯಕ್ರಮವು ಮಹತ್ವದ್ದಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳು