ವಿಜಯಪುರ: ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಬೇಕು ಎಂಬ ಪ್ರಸ್ತಾವಕ್ಕೆ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಸರ್ವಾನುಮತದ ಒಪ್ಪಿಗೆ ವ್ಯಕ್ತವಾಗಿದೆ.
ಈ ಕುರಿತು ಮುಂಬರುವ ವಿಧಾನ ಪರಿಷತ್ ಅಧಿವೇಶನದಲ್ಲಿಯೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಲಾಗಿದೆ.
ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳು, ಆಸ್ಪತ್ರೆಗಳು, ಮಾಲ್‌ಗಳು ಸೇರಿದಂತೆ ಬಹುಮಹಡಿ ಕಟ್ಟಡಗಳಲ್ಲಿನ ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಅಂಗವಿಕಲರನ್ನೇ ಕಡ್ಡಾಯವಾಗಿ ನೇಮಿಸುವ ವ್ಯವಸ್ಥೆ ಜಾರಿಯಾಗಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಇದರಿಂದ ಅಂಗವಿಕಲರಿಗೆ ಉದ್ಯೋಗಾವಕಾಶ ದೊರೆಯುವುದರ ಜೊತೆಗೆ ಸ್ವಾಭಿಮಾನದಿಂದ ಬದುಕಲು ನೆರವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು.
ಬೆಂಗಳೂರು ಸೇರಿದಂತೆ ಹಲವು ಮಹಾನಗರಗಳಲ್ಲಿ ಅಂಗವಿಕಲರು ಲಿಫ್ಟ್ ಆಪರೇಟರ್‌ಗಳಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಉದಾಹರಣೆಗಳಿದ್ದು, ಅವರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ. ವಿಜಯಪುರ ಜಿಲ್ಲೆಯಿಂದ ಆರಂಭವಾಗುವ ಈ ಸಮಾಜಮುಖಿ ಕಾರ್ಯ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟಕ್ಕೂ ವಿಸ್ತರಿಸಲಿ ಎಂಬ ಆಶಯ ವ್ಯಕ್ತವಾಯಿತು.
ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯ ವಿಠ್ಠಲ ಧೋಂಡಿಬಾ ಕಟಕದೊಂಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ