NEET-UG ವಿವಾದ: ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

 🔴 NEET-UG ವಿವಾದ: ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: NEET-UG 2026 ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಪ್ರಕಟಿಸಿದ್ದಾರೆ.


ಯುವಜನರನ್ನು ಉದ್ದೇಶಿಸಿ ಪತ್ರ ಬರೆದಿರುವ ಪ್ರಧಾನ್, NEET-UG ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ತನಿಖೆಯನ್ನು CBIಗೆ ವಹಿಸಲಾಗಿದ್ದು, ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

“ಮೊದಲ ದಿನದಿಂದಲೇ ಈ ಪರಿಸ್ಥಿತಿಯ ಹೊಣೆಗಾರಿಕೆಯನ್ನು ನಾನು ಸ್ವೀಕರಿಸಿದ್ದೇನೆ. ಯಾವುದೇ ಪ್ರತಿಭಾವಂತ ವಿದ್ಯಾರ್ಥಿಗೆ ಅನ್ಯಾಯವಾಗಬಾರದು ಎಂಬುದು ನನ್ನ ಸಂಕಲ್ಪವಾಗಿತ್ತು” ಎಂದು ಅವರು ಹೇಳಿದ್ದಾರೆ.

ದೇಶದ ಯುವಶಕ್ತಿಯೇ ಭಾರತದ ನಿಜವಾದ ಶಕ್ತಿ ಎಂದು ಹೇಳಿರುವ ಅವರು, ಕಳೆದ ಕೆಲವು ದಿನಗಳ ಬೆಳವಣಿಗೆಗಳಿಂದ ಮನಸ್ಸಿಗೆ ನೋವಾಗಿದ್ದು, ಎಲ್ಲ ವಿಚಾರಗಳನ್ನು ಪರಿಗಣಿಸಿ ತಮ್ಮ ರಾಜೀನಾಮೆಯನ್ನು ಪ್ರಧಾನಮಂತ್ರಿಗಳಿಗೆ ಕಳುಹಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಧಾನಮಂತ್ರಿಗಳ ಮಾರ್ಗದರ್ಶನ ಮತ್ತು ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿರುವ ಪ್ರಧಾನ್, ಮುಂದೆಯೂ ಭಾರತ ಮಾತೆ, ಒಡಿಶಾದ ಜನತೆ ಹಾಗೂ ದೇಶದ ಯುವಜನರ ಸೇವೆಗೆ ಸಮರ್ಪಿತನಾಗಿರುವುದಾಗಿ ಹೇಳಿದ್ದಾರೆ.

PetkarMedia | ಸುದ್ದಿ • ಮಾಹಿತಿ • ನಂಬಿಕೆ

#DharmendraPradhan #NEETUG2026 #NEET #EducationMinister #Resignation #BreakingNews #IndiaNews #KannadaNews #PetkarMedia #ParashuPetkar #BagalkotNews

ಕಾಮೆಂಟ್‌ಗಳು