ಸೋಮನಕೊಪ್ಪದಲ್ಲಿ ₹1.30 ಕೋಟಿ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಸೋಮನಕೊಪ್ಪ: ಗ್ರಾಮೀಣ ಪ್ರದೇಶಗಳ ರಸ್ತೆ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸೋಮನಕೊಪ್ಪ ಗ್ರಾಮದಲ್ಲಿ ಅಂದಾಜು ₹1 ಕೋಟಿ 30 ಲಕ್ಷ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಗೆ ಬಾದಾಮಿ ಮತಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಭೀಮಸೇನ ಬಿ. ಚಿಮ್ಮನಕಟ್ಟಿ ಅವರು ಇಂದು ಭೂಮಿಪೂಜೆ ನೆರವೇರಿಸಿ, ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಿದರು.
ಪೂರ್ಣಾನಂದ ಮಠದ ಶ್ರೀ ನೀಲಲೋಹಿತ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ, ಊರಿನ ಸಮಸ್ತ ಗುರು-ಹಿರಿಯರು, ಯುವಕಮಿತ್ರರು, ಗ್ರಾಮ ಮುಖಂಡರು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿಪೂಜೆ ಕಾರ್ಯಕ್ರಮ ನೆರವೇರಿತು.
ಗ್ರಾಮದ ರಸ್ತೆ ಸಂಪರ್ಕ ಹಾಗೂ ಮೂಲಸೌಕರ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಉದ್ದೇಶದಿಂದ ಈ ಮಹತ್ವದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ರಸ್ತೆ ನಿರ್ಮಾಣದಿಂದ ಗ್ರಾಮಸ್ಥರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ದೊರೆಯುವುದರ ಜೊತೆಗೆ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಸಾಗಿಸಲು, ವಿದ್ಯಾರ್ಥಿಗಳು ಸಂಚರಿಸಲು ಹಾಗೂ ಸಾರ್ವಜನಿಕರಿಗೆ ದೈನಂದಿನ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.
ಗ್ರಾಮೀಣ ಭಾಗದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಜನರ ಜೀವನಮಟ್ಟವನ್ನು ಸುಧಾರಿಸಲು ಆದ್ಯತೆ ನೀಡಲಾಗುತ್ತಿದೆ. ರಸ್ತೆ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಗ್ರಾಮಸ್ಥರಿಗೆ ಶಾಶ್ವತ ಅನುಕೂಲ ಕಲ್ಪಿಸುವಂತೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಈರಣ್ಣ ಕರಿಗೌಡ, ಶ್ರೀಕಾಂತಗೌಡ ಗೌಡ್ರ ಹಣಮಂತ ಜೋಗಿನ ಶಿವಾನಂದ ಚೋಳನ್ನ ವರ ಗುರು-ಹಿರಿಯರು, ಯುವಕಮಿತ್ರರು, ಮುಖಂಡರು, ಜನಪ್ರತಿನಿಧಿಗಳು ಹಾಗೂ ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ