ಉತ್ತಮ ಸಂಸ್ಕೃತಿ, ಸಂಸ್ಕಾರ, ಅಭ್ಯಾಸಗಳಿಂದ ಆರೋಗ್ಯಕರ ಸಮಾಜ ನಿರ್ಮಿಸಿ: ಡಾ. ವಿಷ್ಣುವರ್ಧನ

ಉತ್ತಮ ಸಂಸ್ಕೃತಿ, ಸಂಸ್ಕಾರ, ಅಭ್ಯಾಸಗಳಿಂದ ಆರೋಗ್ಯಕರ ಸಮಾಜ ನಿರ್ಮಿಸಿ: ಡಾ. ವಿಷ್ಣುವರ್ಧನ

ಬಾಗಲಕೋಟೆ, ಆ. 1: ಉತ್ತಮ ಸಂಸ್ಕೃತಿ, ಸಂಸ್ಕಾರ ಹಾಗೂ ಒಳ್ಳೆಯ ಅಭ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ವಿಷ್ಣುವರ್ಧನ ಹೇಳಿದರು.



ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ತೋಟಗಾರಿಕೆ ಮಹಾವಿದ್ಯಾಲಯ ಬಾಗಲಕೋಟೆ ಮತ್ತು ಆಲಮೇಲ, ಡೀನ್ ವಿದ್ಯಾರ್ಥಿ ಕಲ್ಯಾಣ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರ ಸಹಯೋಗದಲ್ಲಿ ಪೂಜ್ಯ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನೋತ್ಸವದ ಅಂಗವಾಗಿ ಆಯೋಜಿಸಿದ್ದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಅವರು, ಭಾರತೀಯ ಸಂಸ್ಕೃತಿ ವಿಶ್ವದಲ್ಲಿಯೇ ಶ್ರೇಷ್ಠವಾಗಿದ್ದು, ಆರೋಗ್ಯಕರ ಜೀವನಶೈಲಿ, ಉತ್ತಮ ಮೌಲ್ಯಗಳು ಮತ್ತು ಶಿಸ್ತಿಗೆ ಹೆಚ್ಚಿನ ಮಹತ್ವ ನೀಡಿದೆ ಎಂದರು.

‘ವ್ಯಸನಗಳು ಕ್ಷಣಿಕ ಸಂತೋಷ ನೀಡುವಂತೆ ಕಂಡರೂ, ಅವು ವ್ಯಕ್ತಿಯ ಆರೋಗ್ಯದ ಜೊತೆಗೆ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಕಸಿದುಕೊಳ್ಳುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಮದ್ಯಪಾನ, ತಂಬಾಕು, ಗುಟ್ಕಾ, ಮೊಬೈಲ್ ವ್ಯಸನ ಸೇರಿದಂತೆ ವಿವಿಧ ದುಶ್ಚಟಗಳಿಂದ ದೂರವಿರಬೇಕು. ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಂಡು ಆರೋಗ್ಯಕರ ಮತ್ತು ಮೌಲ್ಯಯುತ ಜೀವನ ನಡೆಸುವ ಮೂಲಕ ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಬೇಕು’ ಎಂದು ಸಲಹೆ ನೀಡಿದರು.

ಡೀನ್ ವಿದ್ಯಾರ್ಥಿ ಕಲ್ಯಾಣ ಡಾ. ಎಂ.ಜಿ. ಕೆರುಟಗಿ ಅವರು ಸಿಬ್ಬಂದಿ, ಎನ್‌ಎಸ್‌ಎಸ್ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳಿಗೆ ವ್ಯಸನಮುಕ್ತ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಭಾರಿ ಡೀನ್ ಡಾ. ಸತೀಶ ಆರ್. ಪಾಟೀಲ, ಆಲಮೇಲ ತೋಟಗಾರಿಕೆ ಮಹಾವಿದ್ಯಾಲಯದ ವಿಶೇಷಾಧಿಕಾರಿ ಡಾ. ಐ.ಬಿ. ಬಿರಾದಾರ ಹಾಗೂ ಎನ್‌ಎಸ್‌ಎಸ್ ಸಂಯೋಜಕ ಡಾ. ವಸಂತ ಎಂ. ಗಾಣಿಗೇರ ಉಪಸ್ಥಿತರಿದ್ದರು.

ಪ್ರಥಮ ಬಿ.ಎಸ್ಸಿ. (ಆನರ್ಸ್) ತೋಟಗಾರಿಕೆ ವಿದ್ಯಾರ್ಥಿನಿ ಸಹನಾ ಎಂ. ಅವರು ಇಳಕಲ್‌ನ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಪೂಜ್ಯ ಲಿಂಗೈಕ್ಯ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜೀವನ ಮತ್ತು ಸಾಧನೆ ಕುರಿತು ಪರಿಚಯಿಸಿದರು.

ವಿಶ್ವವಿದ್ಯಾಲಯದ ಅಧಿಕಾರಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಸ್ನಾತಕ ಹಾಗೂ ಸ್ನಾತಕೋತ್ತರ

ಕಾಮೆಂಟ್‌ಗಳು