ಪೊಲೀಸ್ ಇಲಾಖೆ ನೇಮಕಾತಿಗೆ ಲಿಖಿತ ಪರೀಕ್ಷೆ:ಪರೀಕ್ಷಾ ಕೇಂದ್ರಕ್ಕೆ ಡಿಸಿ ಭೇಟಿ, ಸಿದ್ಧತೆ ಪರಿಶೀಲನೆ
ಬಾಗಲಕೋಟೆ, ಆಗಸ್ಟ 01: ಆಗಸ್ಟ್ 2 ರಂದು ನಡೆಯಲಿರುವ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.
ನಗರದ ಬಿವಿವ ಸಂಘದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ಥಾಪಿಸಲಾದ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಭೇಟಿ ನೀಡಿದ ಸಂದರ್ಭದಲ್ಲಿ ಪರೀಕ್ಷಾ ಕೊಠಡಿಗಳು, ಅಭ್ಯರ್ಥಿಗಳಿಗೆ ಕಲ್ಪಿಸಿರುವ ಮೂಲಸೌಕರ್ಯ, ಕುಡಿಯುವ ನೀರು, ಆಸನ ವ್ಯವಸ್ಥೆ, ಭದ್ರತಾ ಕ್ರಮಗಳು ಹಾಗೂ ಸಿಸಿಟಿವಿ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ ಜಿಲ್ಲಾಧಿಕಾರಿಗಳು, ಪರೀಕ್ಷೆಯನ್ನು ಪಾರದರ್ಶಕವಾಗಿ, ಶಾಂತಿಯುತವಾಗಿ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ನಡೆಸುವಂತೆ ನಿರ್ದೇಶನ ನೀಡಿದರು. ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸೂಚಿಸಿದರು.ಭೇಟಿ ಸಮಯದಲ್ಲಿ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ ಸೇರಿದಂತೆ ಇತರರು ಇದ್ದರು.



ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ