ಬೆಂಗಳೂರು: ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಅವರು ಮಂಗಳವಾರ ಬೆಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟದ ನೂತನ ಸಚಿವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಸಚಿವರಾದ ಲಕ್ಷ್ಮಣ ಸವದಿ, ಬಸವಂತಪ್ಪ, ಶಿವರಾಜ್ ತಂಗಡಗಿ, ಬಸವರಾಜ ರಾಯರೆಡ್ಡಿ ಹಾಗೂ ರುದ್ರಪ್ಪ ಲಮಾಣಿ ಅವರನ್ನು ಅವರ ನಿವಾಸಗಳಲ್ಲಿ ಭೇಟಿ ಮಾಡಿದ ಶಾಸಕ ಉಮೇಶ್ ಮೇಟಿ, ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಶುಭಾಶಯ ಕೋರಿದರು.
ಇದೇ ವೇಳೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಚಿವರೊಂದಿಗೆ ಚರ್ಚಿಸಿದರು. ಕ್ಷೇತ್ರದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅಗತ್ಯ ಅನುದಾನ ಹಾಗೂ ಸಹಕಾರ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಹೊಳೆಬಸು ಶೆಟ್ಟರ್, ಮಲ್ಲಿಕಾರ್ಜುನ ಚರಂತಿಮಠ, ಸಂಗಣ್ಣ ಹಂಡಿ, ಶ್ರೀಕರ್ ದೇಸಾಯಿ, ರಾಯಪ್ಪ ವಾಲೀಕಾರ ಹಾಗೂ ಬಸಪ್ಪ ಹುಡೆದ ಉಪಸ್ಥಿತರಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ