ಹಲಕುರ್ಕಿ ಗ್ರಾಮದಲ್ಲಿ ಮೊಸಳೆ ಪ್ರತ್ಯಕ್ಷ: ಆತಂಕಗೊಂಡ ಗ್ರಾಮಸ್ಥರು

ಹಲಕುರ್ಕಿ ಗ್ರಾಮದಲ್ಲಿ ಮೊಸಳೆ ಪ್ರತ್ಯಕ್ಷ: ಆತಂಕಗೊಂಡ ಗ್ರಾಮಸ್ಥರು

ಬಾದಾಮಿ: ತಾಲೂಕಿನ ಹಲಕುರ್ಕಿ ಗ್ರಾಮದ ಕೆರೆಯ ಪಕ್ಕದಲ್ಲಿ ಬುಧವಾರ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತು.

ಕೆರೆಯ ಸಮೀಪ ಮೊಸಳೆ ಕಾಣಿಸಿಕೊಂಡ ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೊಸಳೆಯನ್ನು ಸುರಕ್ಷಿತವಾಗಿ ಸೆರೆ ಹಿಡಿದರು. ಬಳಿಕ ಅದನ್ನು ಸೂಕ್ತ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿ ಬಿಡಲಾಯಿತು.

ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ಅಧಿಕಾರಿ ಮಹೇಶ ಮರೆಣ್ಣವರ, ಉಪ ವಲಯ ಅರಣ್ಯ ಅಧಿಕಾರಿ ನಿಂಗಪ್ಪ ಯಲಿಗಾರ, ಆನಂದ ಜಯಗೌಡರ ಹಾಗೂ ಗಸ್ತು ಅರಣ್ಯ ಪಾಲಕರಾದ ಆನಂದ ರಾಜನಾಳ, ಶಿವರಾಜ ಸಜ್ಜನ, ಆನಂದ ಹಣಶಿ, ಮೈಬುಸಾಬ ನದಾಫ, ಅಕ್ಷಯ ಹಾವಗೊಂಡ ಮತ್ತು ವೀರಭದ್ರ ಸಂಕನ್ನವರ ಪಾಲ್ಗೊಂಡಿದ್ದರು.

ಮೊಸಳೆಯನ್ನು ಸುರಕ್ಷಿತವಾಗಿ ಸೆರೆ ಹಿಡಿದು ಸ್ಥಳಾಂತರಿಸಿದ ಬಳಿಕ ಗ್ರಾಮಸ್ಥರು ನಿಟ್ಟುಸಿರು ಬಿಟ್ಟರು.

ಕಾಮೆಂಟ್‌ಗಳು