ಬಾಗಲಕೋಟೆ: ‘ಪೋಸ್ಟಲ್ ಸಖಿ’ ನೇರ ಪ್ರತಿನಿಧಿಗಳ ನೇಮಕಕ್ಕೆ ಅರ್ಜಿ ಆಹ್ವಾನ
ಬಾಗಲಕೋಟೆ: ಬಾಗಲಕೋಟೆ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟಕ್ಕಾಗಿ ‘ಪೋಸ್ಟಲ್ ಸಖಿ’ ನೇರ ಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರ, ಸ್ವವಿವರ ಹಾಗೂ ಶೈಕ್ಷಣಿಕ ಪ್ರಮಾಣಪತ್ರಗಳ ನಕಲುಗಳೊಂದಿಗೆ ಆಗಸ್ಟ್ 21, 2026ರಂದು ಬೆಳಗ್ಗೆ 11 ಗಂಟೆಗೆ ಬಾಗಲಕೋಟೆ ಸ್ಟೇಶನ್ ರಸ್ತೆಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು. ಸ್ವಸಹಾಯ ಸಂಘದ ಸಕ್ರಿಯ ಸದಸ್ಯೆಯಾಗಿರುವುದು ಕಡ್ಡಾಯ. ಉತ್ತಮ ಸಂವಹನ ಕೌಶಲ್ಯ ಹೊಂದಿರುವ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು ₹5,000 ಭದ್ರತಾ ಠೇವಣಿಯನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಇಡಬೇಕಾಗುತ್ತದೆ. ಅವರು ನಡೆಸುವ ವ್ಯವಹಾರಕ್ಕೆ ಅನುಗುಣವಾಗಿ ಸೂಕ್ತ ಕಮಿಷನ್ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿ ಅಥವಾ ಅಂಚೆ ಜೀವ ವಿಮಾ ಅಭಿವೃದ್ಧಿ ಅಧಿಕಾರಿಗಳನ್ನು 8217297792 / 7337899266 ಸಂಪರ್ಕಿಸಬಹುದು ಎಂದು ಬಾಗಲಕೋಟೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ