ಇಳಕಲ್ಲ ಗ್ರಾನೈಟ್ ಫ್ಯಾಕ್ಟರಿಯಲ್ಲಿ ದುರಂತ: ಕಲ್ಲಿನ ಸ್ಲ್ಯಾಬ್ ಬಿದ್ದು ಉತ್ತರ ಪ್ರದೇಶದ ಕಾರ್ಮಿಕ ಸಾವು
ಇಳಕಲ್ಲ: ಗ್ರಾನೈಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಭಾರೀ ಗಾತ್ರದ ಕಲ್ಲಿನ ಸ್ಲ್ಯಾಬ್ ಆಕಸ್ಮಿಕವಾಗಿ ಬಿದ್ದು ಉತ್ತರ ಪ್ರದೇಶ ಮೂಲದ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಳಕಲ್ಲ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.2ರ ಮುಂಜಾನೆ ನಡೆದಿದೆ.
ಮೃತನನ್ನು ಉತ್ತರ ಪ್ರದೇಶದ ಕಮಲಾಪುರ ಜಿಲ್ಲೆಯ ಚಂದೌಲಿ ಗ್ರಾಮದ ಪ್ರದ್ಯುಮ್ನ ಕುಮಾರ್ ಎಂದು ಗುರುತಿಸಲಾಗಿದೆ.
ನಗರದ ಉಪನಾಳ ಕ್ರಾಸ್ ಬಳಿ ಮಂಜುನಾಥ ಶೆಟ್ಟರ್ ಅವರಿಗೆ ಸೇರಿದ ಪ್ಲಾಟಿನಮ್ ಗ್ರಾನೈಟ್ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ. ಎಂದಿನಂತೆ ಕಲ್ಲು ಕಟಿಂಗ್ ಕೆಲಸದಲ್ಲಿ ತೊಡಗಿದ್ದ ವೇಳೆ ಭಾರೀ ಗಾತ್ರದ ಕಲ್ಲಿನ ಸ್ಲ್ಯಾಬ್ ಆಕಸ್ಮಿಕವಾಗಿ ಪ್ರದ್ಯುಮ್ನ ಕುಮಾರ್ ಅವರ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ