ಶಿಕ್ಷಕರ ಪಾತ್ರ ಮಹತ್ವದ್ದು: ಕೆಂಗಲಗುತ್ತಿ

ಬಾಗಲಕೋಟೆ: ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಡಾ. ಎಸ್.ಡಿ. ಕೆಂಗಲಗುತ್ತಿ ಹೇಳಿದರು.

ನಗರದ ಬಿ.ವಿ.ವಿ.ಎಸ್. ಬಸವೇಶ್ವರ ಪದವಿ ಪೂರ್ವ ಕಲಾ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಹಾಗೂ ವಿದ್ಯಾರ್ಥಿಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜೀವನ, ಆದರ್ಶಗಳು ಹಾಗೂ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದ ಅವರು, ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ, ಉತ್ತಮ ನಡತೆ ಹಾಗೂ ಜವಾಬ್ದಾರಿಯುತ ಮನೋಭಾವ ಬೆಳೆಸಿಕೊಳ್ಳಬೇಕು. ಶಿಸ್ತುಬದ್ಧ ಜೀವನವೇ ಯಶಸ್ಸಿನ ಅಡಿಪಾಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಎಸ್.ಆರ್. ಮುಗನೂರಮಠ ಮಾತನಾಡಿ, ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳಿಗೆ ಮೌಲ್ಯ, ಸಂಸ್ಕಾರ ಹಾಗೂ ಜೀವನದ ಮಾರ್ಗದರ್ಶನ ನೀಡುವವರು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಮಹತ್ವದ್ದಾಗಿದೆ ಎಂದರು.

ಡಾ. ಎ.ಯು. ರಾಥೋಡ್, ಡಾ. ಕೆ.ವಿ. ಮಠ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಆರ್.ಆರ್. ಅರಶಿನಗೋಡಿ, ಕು. ಎಸ್.ಎಸ್. ಜೋರಾಪೂರ, ಶ್ರೀಮತಿ ಜೆ.ಎನ್. ದಿವಟೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಕಾಮೆಂಟ್‌ಗಳು