*ಎನ್ಪಿಎಸ್ ದಿವಸ್-2026 : 8 ರಂದು ಜಾಗೃತಿ ಅಭಿಯಾನ*
ಬಾಗಲಕೋಟೆ : ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ಹಾಗೂ ಆರ್ಥಿಕವಾಗಿ ಸುರಕ್ಷಿತ ಭವಿಷ್ಯಕ್ಕಾಗಿ ಪಿಂಚಣಿ ಯೋಜನೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ 8 ರಂದು ಎನ್ಪಿಎಸ್ ಸಂಚಯ ಯಾತ್ರೆ ಬಾಗಲಕೋಟೆ ಜಿಲ್ಲೆಗೆ ಆಗಮಿಸಲಿದೆ.
ಎನ್ಪಿಎಸ್ ದಿವಸ್–2026 ಅಭಿಯಾನದ ಅಂಗವಾಗಿ ದೇಶಾದ್ಯಂತ ಪಿಂಚಣಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ವತಿಯಿಂದ ಈ ಸಂಚಯ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಅಕ್ಟೋಬರ್ 1 ರಿಂದ 15ರ ವರೆಗೆ ವಿವಿಧ ನಗರಗಳು ಹಾಗೂ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದೆ. ಬಾಗಲಕೋಟೆ ಜಿಲ್ಲೆಗೆ ಯಾತ್ರೆ ಆಗಮಿಸುವ ಸಂದರ್ಭದಲ್ಲಿ ತರಬೇತಿ ಪಡೆದ ಪ್ರತಿನಿಧಿಗಳು ಎನ್ಪಿಎಸ್ ಸಂಚಯದ ವೈಶಿಷ್ಟಗಳು ಹಾಗೂ ಪ್ರಯೋಜನಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಿದ್ದಾರೆ. ಅಲ್ಲದೆ, ಎನ್ಪಿಎಸ್ ಖಾತೆ ತೆರೆಯುವುದು, ಕೊಡುಗೆ ಸಲ್ಲಿಕೆ ಸೇರಿದಂತೆ ವಿವಿಧ ಪ್ರಕ್ರಿಯೆಗಳ ಕುರಿತು ಮಾರ್ಗದರ್ಶನ ನೀಡುವುದರ ಜೊತೆಗೆ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.
ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎನ್ಪಿಎಸ್ ಯೋಜನೆಯ ಪ್ರಯೋಜನಗಳು ಹಾಗೂ ಭವಿಷ್ಯದ ಆರ್ಥಿಕ ಭದ್ರತೆಗಾಗಿ ರೂಪಿಸಿಕೊಳ್ಳಬಹುದಾದ ಪಿಂಚಣಿ ಯೋಜನೆಗಳ ಕುರಿತು ಮಾಹಿತಿ ಪಡೆದುಕೊಳ್ಳುವಂತೆ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ರಾಜಕುಮಾರ್ ಹೂಗಾರ್ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9448282083 ಸಂಖ್ಯೆಯನ್ನು ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ