ಗಾಂಧೀ ಜಯಂತಿ ಅಂಗವಾಗಿ ಸ್ವಚ್ಛತಾ ಅಭಿಯಾನ
ಬಾಗಲಕೋಟೆ,: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಹಾಗೂ ನಗರ ಬ್ಲಾಕ ಕಾಂಗ್ರೆಸ ಪಕ್ಷದ ವತಿಯಿಂದ ಬಾಗಲಕೋಟೆ ನಗರದ ಸೆಟಲ್‌ಮೆಂಟ್ ಕಾಲೋನಿ, ಸಕ್ರಿ ಹೈಸ್ಕೂಲ್ ಹತ್ತಿರ ಸ್ವಚ್ಛತಾ ಅಭಿಯಾನ ಹಾಗೂ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಬಾಗಲಕೋಟೆ ಶಾಸಕ ಶ್ರೀ ಉಮೇಶ ಹುಲ್ಲಪ್ಪ ಮೇಟಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ರೀ ದಯಾನಂದ ಪಾಟೀಲ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶ್ರೀ ನಾಗರಾಜ ಎಸ್. ಹದ್ಲಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ ಮೇಟಿ, ಮಹಾತ್ಮ ಗಾಂಧೀಜಿಯವರ ಜೀವನ ಮತ್ತು ಸಂದೇಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಸ್ವಚ್ಛತೆ, ಶಿಸ್ತು ಮತ್ತು ಸಾರ್ವಜನಿಕ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ವಚ್ಛ ಪರಿಸರ ನಿರ್ಮಾಣ ಸರ್ಕಾರದ ಮಾತ್ರ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ದಯಾನಂದ ಪಾಟೀಲ ಮಾತನಾಡಿ, ಗಾಂಧೀಜಿಯವರ ಸ್ವಚ್ಛತಾ ಪರಿಕಲ್ಪನೆಯನ್ನು ಜನರ ಜೀವನದ ಭಾಗವನ್ನಾಗಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಜನರಲ್ಲಿ ನಿರಂತರ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಎಸ್. ಹದ್ಲಿ ಮಾತನಾಡಿ, ಗಾಂಧೀಜಿಯವರ ಸ್ವಚ್ಛ ಭಾರತ ಕನಸನ್ನು ನನಸು ಮಾಡಲು ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛತಾ ಅಭಿಯಾನವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿರಂತರ ಜನಚಳವಳಿಯಾಗಬೇಕು. ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಕಾಪಾಡುವುದರ ಜೊತೆಗೆ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಬ್ಲಾಕ ಅಧ್ಯಕ್ಷರಾದ ಅಕ್ಬರ ಮುಲ್ಲಾ ಎಸ ಎನ ರಾಂಪೂರ , ಬುಡಾ ಅಧ್ಯಕ್ಷ ಅಬ್ದುಲರಜಾಕ ಬೇಣೂರ ಪ್ರಚಾರ ಸಮಿತಿಯ ಬ್ಲಾಕ ಅಧ್ಯಕ್ಷ ಸುನೀಲ ಬಾಲಗಾವಿ, ಜಿಲ್ಲಾ ಮುಖ್ಯ ಸಂಯೋಜಕ ಶ್ರೀದರ ನೀಲನಾಯಕ ಮಹಿಳಾ ಜಿಲ್ಲಾಧ್ಯಕ್ಷೆ ಸುಮಿತ್ರ ಗುಳಬಾಳ ಮುಖಂಡರಾದ ಮಲ್ಲಿಕಾರ್ಜುನ ಮೇಟಿ ಎನ ಬಿ ಗಸ್ತಿ ಹನಮಂತ ರಾಕುಂಪಿ,ಹಾಜಿಸಾಬ ದಂಡಿನ ಬಾಲರಾಜ ಚವ್ಹಾಣ,ಲಕ್ಷ್ಮಿ ಚವ್ಹಾಣ, ಇಮಾಮಸಾಬ ಬಳಬಟ್ಟಿ, ವಿಜಯ ಮುಳ್ಳೂರ ವೀರಣ್ಣ ಹುಂಡೆಕಾರ ಅಭಿಷೇಕ ತಳ್ಳಿಕೇರಿ ರೇಣುಕಾ ನ್ಯಾಮಗೌಡ,ರೇಣುಕಾ ನಾರಾಯಣಕರ, ಮಂಜುಳಾ ಭುಸಾರೆ ಮುಮತಾಜ ಸುತಾರ,ಜಯಶ್ರೀ ಗುಳಬಾಳ ಬಾನುಬಿ ಇಲಕಲ್ಲ ಶಂಕರ ನಾಯಕ ಅಜೇಯ ಕಪಾಟೆ ಸುರೇಶ ಝಿಂಗಾಡೆ ಮಲ್ಲು ಲಮಾಣಿ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರಿಕರು ಪಾಲ್ಗೊಂಡು ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ