ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತು ವಿದ್ಯಾರ್ಥಿಗಳಿಗೆ ಎಸ್‌ಪಿ ಗೋಯಲ್ ಮಾರ್ಗದರ್ಶನ*
*ಬಾಗಲಕೋಟೆ:* ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ವೃತ್ತಿ ಅಭಿವೃದ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಹಾಗೂ ಸರ್ಕಾರಿ ಉದ್ಯೋಗಗಳ ಅವಕಾಶಗಳ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ವಿಡಿಯೋ ವಚ್ರ್ಯೂವಲ್ ಮೂಲಕ ಮಾರ್ಗದರ್ಶನ ನೀಡಿದರು.
ರವಿವಾರ ನವನಗರದಲ್ಲಿರುವ ಜಿ.ಪಂ ಸಂಪನ್ಮೂಲ ಕೇಂದ್ರದ ಮೂಲಕ ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಹೊಂದಿರಬೇಕು. ಗುರಿ ಸಾಧನೆಗೆ ಶಿಸ್ತು, ಸಮಯ ನಿರ್ವಹಣೆ, ನಿರಂತರ ಅಧ್ಯಯನ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವಾಗ ಸೂಕ್ತ ಅಧ್ಯಯನ ಯೋಜನೆ ರೂಪಿಸಿಕೊಂಡು ಪ್ರಚಲಿತ ವಿದ್ಯಮಾನಗಳು, ಸಾಮಾನ್ಯ ಜ್ಞಾನ ಹಾಗೂ ಹಿಂದಿನ ವರ್ಷದ ಪ್ರಶ್ನೆಪತ್ರಿಕೆಗಳ ಅಭ್ಯಾಸಕ್ಕೆ ಆದ್ಯತೆ ನೀಡಬೇಕು ಎಂದರು.
ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳು, ನೇಮಕಾತಿ ಪರೀಕ್ಷೆಗಳ ಸ್ವರೂಪ, ಪರೀಕ್ಷೆ ಎದುರಿಸುವ ತಂತ್ರಗಳು ಹಾಗೂ ವೃತ್ತಿ ಆಯ್ಕೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಹಿನ್ನೆಲೆಯನ್ನು ಮಿತಿಯೆಂದು ಭಾವಿಸದೆ, ಲಭ್ಯವಿರುವ ಶೈಕ್ಷಣಿಕ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಸಾಧನೆ ಮಾಡುವತ್ತ ಗಮನಹರಿಸಬೇಕು ಎಂದು ಪ್ರೇರೇಪಿಸಲಾಯಿತು.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮದ ಜೊತೆಗೆ ನಿರಂತರ ಪ್ರಯತ್ನ ಹಾಗೂ ಸರಿಯಾದ ಮಾರ್ಗದರ್ಶನ ಅಗತ್ಯ. ವಿದ್ಯಾರ್ಥಿಗಳು ಸಮಯವನ್ನು ಸದುಪಯೋಗಪಡಿಸಿಕೊಂಡು ಜ್ಞಾನ, ಕೌಶಲ್ಯ ಹಾಗೂ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವ ಮೂಲಕ ಭವಿಷ್ಯದಲ್ಲಿ ಜವಾಬ್ದಾರಿಯುತ ಸರ್ಕಾರಿ ಅಧಿಕಾರಿಗಳಾಗುವ ಗುರಿ ಹೊಂದಬೇಕು ಎಂಬ ಸಂದೇಶ ನೀಡಿದರು.
ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅರಿವು ಮೂಡಿಸಿ, ಆತ್ಮವಿಶ್ವಾಸ ತುಂಬಿ ಸರ್ಕಾರಿ ಉದ್ಯೋಗ ಪಡೆಯುವ ಅವರ
ನನಸಾಗಿಸಲು ಪ್ರೇರೇಪಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ