ಬಾಗಲಕೋಟೆ: ಮೆದುಳಿನ ಪಾರ್ಶ್ವವಾಯು (ಬ್ರೇನ್ ಸ್ಟ್ರೋಕ್) ಸಂಭವಿಸಿದಾಗ ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಅತ್ಯಂತ ಮಹತ್ವದ್ದಾಗಿದೆ. ಸ್ಟ್ರೋಕ್ನ ಲಕ್ಷಣಗಳನ್ನು ಗುರುತಿಸಿ, ವಿಳಂಬ ಮಾಡದೆ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಗಂಭೀರ ಪರಿಣಾಮಗಳನ್ನು ಕಡಿಮೆ ಮಾಡಬಹುದು ಎಂದು ನರರೋಗ ತಜ್ಞ ವೈದ್ಯ ಡಾ. ರಾಕೇಶ ಎ.ವಿ. ಹೇಳಿದರು.
ನಗರದ ಬಿಟಿಡಿಎ ಸಭಾಭವನದಲ್ಲಿ ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಆಶ್ರಯದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಾಗಿ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೆದುಳಿನ ಪಾರ್ಶ್ವವಾಯು ಸಂಭವಿಸಿದಾಗ ಮೊದಲ ಕ್ಷಣಗಳಿಂದಲೇ ಚಿಕಿತ್ಸೆಗೆ ಆದ್ಯತೆ ನೀಡಬೇಕು. ಸ್ಟ್ರೋಕ್ನ ಲಕ್ಷಣಗಳನ್ನು ಆರಂಭದಲ್ಲಿಯೇ ಗುರುತಿಸಿ, ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಿಸುವುದು ಅಗತ್ಯ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆತರೆ ಸಂಭವಿಸಬಹುದಾದ ಗಂಭೀರ ಪರಿಣಾಮಗಳನ್ನು ಕಡಿಮೆ ಮಾಡಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ವಿಜಯಕುಮಾರ ಹೊಸೂರ, ಖಜಾಂಚಿ ತುಕಾರಾಂ ಟಿ.ಎನ್. ಸೇರಿದಂತೆ ಕ್ಲಬ್ನ ಸದಸ್ಯರು ಭಾಗವಹಿಸಿದ್ದರು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ವಾಣಿ ವಿಜಯಕುಮಾರ ಹೊಸೂರ, ಪ್ರತಿಭಾ ದಂಡಿನ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.
ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಚಂದ್ರಹಾಸ ಬಂಡಿ ಹಾಗೂ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಎಸ್. ಕರಗಾರ ಅವರು ಆರೋಗ್ಯ ಜಾಗೃತಿ ಮೂಡಿಸುವ ಇಂತಹ ಉಪಯುಕ್ತ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ನ ಕಾರ್ಯವನ್ನು ಶ್ಲಾಘಿಸಿದರು.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ